ಚೆನ್ನೈ:ಕರ್ನಾಟಕದಲ್ಲಿ ಮಕ್ಕಳು ಶಾಲೆಗೆ ಬರಬೇಕಿದ್ದರೆ ಅವರ ಪಾಲಕರು ಎರಡೂ ಡೋಸ್ ಲಸಿಕೆ ತೆಗೆದುಕೊಂಡಿರಬೇಕು ಎಂಬ ಸೂಚನೆ ನೀಡಲಾಗಿದೆ. ಅತ್ತ ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗೇ ಲಸಿಕೆ ಕಡ್ಡಾಯ ಮಾಡಲಾಗಿದೆ.
ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕಿದ್ದರೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಆರೋಗ್ಯ ಇಲಾಖೆ ಮೂಲಕ ಆದೇಶ ಹೊರಡಿಸಲಾಗಿದೆ ಎಂದು ಅಲ್ಲಿನ ಆರೋಗ್ಯ ಮಂತ್ರಿ ಸುಬ್ರಮಣಿಯನ್​ ತಿಳಿಸಿದ್ದಾರೆ.
ಇದನ್ನೂ ಓದಿ:ಒಮಿಕ್ರಾನ್​ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಹೊರಬಿತ್ತು ಅದು ಜಾಗತಿಕವಾಗಿ ಅಪಾಯಕಾರಿ ಎನ್ನುವ ವಿಷಯ!
ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ನಡೆದ ಸಭೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಂಡು, ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಆದೇಶ ಹೊರಡಿಸಲಾಗಿದೆ. ಆ ಪ್ರಕಾರ ತರಗತಿಗೆ ಬರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕಡೇಪಕ್ಷ ಒಂದು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕಾದ್ದು ಕಡ್ಡಾಯ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಜೀವಾವಧಿ ಶಿಕ್ಷೆಗೊಳಗಾಗಿದ್ದವ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪರಾರಿ; 3 ವರ್ಷಗಳ ಕಾಲ ಸಿಗದೇ ಇರಲು ಹೀಗೆ ಮಾಡಿದ್ದ…
18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಲ್ಲಿ ಶೇ. 46 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಪಡೆದಿದ್ದು, ಶೇ. 12 ವಿದ್ಯಾರ್ಥಿಗಳು ಮಾತ್ರ ಎರಡು ಡೋಸ್ ಲಸಿಕೆ ಪಡೆದಿದ್ದಾರೆ ಎಂದಿರುವ ಸಚಿವರು, ನೂರಕ್ಕೆ ನೂರರಷ್ಟು ವಿದ್ಯಾರ್ಥಿಗಳು ಎರಡೂ ಡೋಸ್ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡುವುದು ನಮ್ಮ ಗುರಿ ಎಂದಿದ್ದಾರೆ.
ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಯೋಧ; ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರಲ್ಲಿ ಘಟನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + twelve =
Remember me
