ನವದೆಹಲಿ:ಕಾಂಗ್ರೆಸ್​ಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂಬಂಧ ಭಾನುವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಏರ್ಪಡಿಸಲಾಗಿದೆ. ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಸಭೆ ನಡೆಯುತ್ತಿದ್ದು, ಜಿ-23 ಬಂಡಾಯ ಗುಂಪಿನ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಲಂಡನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ಕೂಡ ಅವರ ಜತೆಗೆ ತೆರಳಿದ್ದಾರೆ. ಹೀಗಾಗಿ ಕಾರ್ಯಕಾರಿ ಸಮಿತಿ ಸಭೆ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಯಲಿದೆ. ರಾಹುಲ್ ಗಾಂಧಿಯವರು ಅಧ್ಯಕ್ಷ ಹುದ್ದೆ ಸ್ವೀಕರಿಸಬೇಕು ಎಂದು ಬೆಂಬಲಿಗ ವರ್ಗ ಒತ್ತಾಯಿಸಿದ್ದರೂ, ಅವರು ನಿರಾಸಕ್ತಿ ತೋರಿದ್ದಾರೆ. ಆಜಾದ್ ಕೂಡ, ಪಕ್ಷದ ಶೋಚನೀಯ ಸ್ಥಿತಿಗೆ ರಾಹುಲ್ ನೇರ ಕಾರಣ ಎಂಬ ಗಂಭೀರ ಆಪಾದನೆ ಮಾಡಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಭೆಯಲ್ಲಿ ರಾಹುಲ್ ಏನು ಮಾತನಾಡಬಹುದು ಎಂಬ ಕುತೂಹಲವೂ ಗರಿಗೆದರಿದೆ.
ಅಜಾದ್ ನಿವಾಸಕ್ಕೆ ಶರ್ಮ:ಗುಲಾಂ ನಬಿ ಆಜಾದ್ ನಿವಾಸಕ್ಕೆ ಶನಿವಾರ ತೆರಳಿದ ಮತ್ತೋರ್ವ ಅತೃಪ್ತ ನಾಯಕ ಆನಂದ್ ಶರ್ಮ, ತಮ್ಮ ಮುಂದಿನ ನಡೆ ಬಗ್ಗೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. ಮೂಲತಃ ಹಿಮಾಚಲ ಪ್ರದೇಶದ ಆನಂದ್, ಕೆಲ ದಿನಗಳ ಹಿಂದೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ. ರಾಹುಲ್ ನಾಯಕತ್ವ ಹಾಗೂ ಅವರ ಹಿಂಬಾಲಕರ ಬಗ್ಗೆ ಆನಂದ್ ಕೂಡಾ ತೀವ್ರ ಅಸಮಾಧಾನ ಹೊಂದಿದ್ದಾರೆ.
ತಿವಾರಿ ವಾಗ್ದಾಳಿ:ಭಾರತ ಒಂದು ರೀತಿ ಯೋಚಿಸಿದರೆ ಕಾಂಗ್ರೆಸ್ ಪಕ್ಷ ಮತ್ತೊಂದು ರೀತಿ ಯೋಚಿಸುತ್ತಿದೆ. ಭಾರತ ಮತ್ತು ಕಾಂಗ್ರೆಸ್ ಮಧ್ಯೆ ದೊಡ್ಡ ಬಿರುಕು ಮೂಡಿರುವುದು ಎದ್ದು ಕಾಣುತ್ತಿದೆ. 2 ವರ್ಷಗಳ ಹಿಂದೆ ನಾವು 23 ನಾಯಕರು ಸೋನಿಯಾ ಗಾಂಧಿಗೆ ಪತ್ರ ಬರೆದು ವಾಸ್ತವ ಸ್ಥಿತಿ ವಿವರಿಸುವ ಯತ್ನ ಮಾಡಿದೆವು. ಆ ಬಗ್ಗೆ ಇನ್ನಾದರೂ ಗಂಭೀರವಾಗಿ ಅಲೋಚಿಸಬೇಕಿದೆ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + sixteen =
Remember me
