ಬೆಂಗಳೂರು:ಇಂದು ಭಾರತ-ನೆದರ್ಲೆಂಡ್​ ನಡುವೆ ಇಂದು ಕೊನೆಯ ಲೀಗ್ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ಸ್ಟೇಡಿಯಂ ಸುತ್ತಾಮುತ್ತಾ ಭದ್ರತೆ ಕೈಗೊಂಡಿದ್ದು, ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದ್ದು, ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ನಾಲ್ವರು ಡಿಸಿಪಿಗಳ ನೇತೃತ್ವದಲ್ಲಿ ಎಂ.ಚಿನ್ನಸ್ವಾಮಿ ಮೈದಾನಕ್ಕೆ ಭದ್ರತೆ ಒದಗಿಸಲಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗದಂತೆ ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.
ಪಾರ್ಕಿಂಗ್ ವ್ಯವಸ್ಥೆ:ನಗರದ ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ರಾಜಭನವ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್​ಬಾ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ಸಂಪೂರ್ಣ ನಿಷೇಧಿಸಿದ್ದು, ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್, ಶಿವಾಜಿನಗರ ಬಸ್ ನಿಲ್ದಾಣ ಸೇರಿದಂತೆ ನಿಗದಿತ ಸ್ಥಳದಲ್ಲಿ ಮಾತ್ರ ವಾಹನಗಳ ನಿಲುಗಡೆಗೆ ಪೊಲೀಸರು ಮನವಿ ಮಾಡಿದ್ದಾರೆ.
ದಾಖಲೆ ಬರೆದ ತಿರುಪತಿ ತಿಮ್ಮಪ್ಪ; ಗೋವಿಂದನ ದರ್ಶನದ 2.25 ಲಕ್ಷ ಟಿಕೆಟ್ 21 ನಿಮಿಷದಲ್ಲಿ ಖಾಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
