ನವದೆಹಲಿ:ಟೋಕಿಯೋ ಒಲಿಂಪಿಕ್ಸ್​ನಲ್ಲಿ 49ಕೆಜಿ ವಿಭಾಗದ ವೇಟ್​ ಲಿಫ್ಟಿಂಗ್​ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಸಿದ ಮೀರಾಬಾಯಿ ಚಾನು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ಇದೊಂದು ಸಂತೋಷದಾಯಕ ಆರಂಭ. ಇದರಿಂದ ಭಾರತವು ಉಲ್ಲಾಸಗೊಂಡಿದೆ. ಅದ್ಭುತ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಅಭಿನಂದನೆ. ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯನನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.
ಇಷ್ಟೇ ಅಲ್ಲದೆ, #Cheer4India ಎಂಬ ಹ್ಯಾಶ್​ಟ್ಯಾಗ್​ ಮೂಲಕ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಹುರಿದುಂಬಿಸಿದ್ದಾರೆ.
Could not have asked for a happier start to@Tokyo2020! India is elated by@mirabai_chanu’s stupendous performance. Congratulations to her for winning the Silver medal in weightlifting. Her success motivates every Indian.#Cheer4India#Tokyo2020pic.twitter.com/B6uJtDlaJo
— Narendra Modi (@narendramodi)July 24, 2021

ಪುರುಷರ 10 ಮೀ ಏರ್​ ಪಿಸ್ತೋಲ್​ ಸ್ಪರ್ಧೆಯಲ್ಲಿ ಭಾರತದ ಸೌರಭ್ ಚೌಧರಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಮೊದಲಿಗರಾಗಿ ಆಟ ಮುಗಿಸಿದ್ದಾರೆ. ಈ ಮೂಲಕ ಪದಕಗಳಿಗಾಗಿ ಸೆಣಸುವ ಫೈನಲ್ಸ್ ಸ್ಪರ್ಧೆಗೆ ಬಡ್ತಿ ಪಡೆದಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four − three =
Remember me
