ಚೆನ್ನೈ:ತಮಿಳುನಾಡಿನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಉನ್ನತ ಹುದ್ದೆಯಲ್ಲಿರುವ ಪುರುಷ ಸಹೋದ್ಯೋಗಿಯ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದುರ್ನಡತೆಯ ಆರೋಪ ಮಾಡಿದ್ದಾರೆ. ಈ ದುಷ್ಕೃತ್ಯವು ಇತ್ತೀಚೆಗೆ ಮುಖ್ಯ ಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ನಡೆಸಿದ ಜಿಲ್ಲಾವಾರು ಪ್ರವಾಸದ ವೇಳೆಯಲ್ಲಿ ನಡೆದಿದೆ ಎನ್ನಲಾಗಿದೆ.
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವವರು ಚೆನ್ನೈನ ಸ್ಪೆಷಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್(ಲಾ ಅಂಡ್ ಆರ್ಡರ್) ಆದ ರಾಜೇಶ್ ದಾಸ್. ಈ ಆರೋಪದ ಹಿನ್ನೆಲೆಯಲ್ಲಿ ದಾಸ್​ ಅವರನ್ನು ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಯ ಸುರಕ್ಷತಾ ವ್ಯವಸ್ಥೆ ಕುರಿತಾದ ಸಭೆಗಳಿಂದ ಹೊರಗಿರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಹದಿಹರೆಯದ ಮಗಳನ್ನೇ ರೇಪ್ ಮಾಡಿ ಗರ್ಭಿಣಿಯಾಗಿಸಿದ, ಗರ್ಭಪಾತವಾದ ಮೇಲೆ ಮತ್ತೆ ಮೇಲೆರಗಿದ… ಕೋರ್ಟ್ ಹೇಳಿದ್ದೇನು ?
ಆರೋಪದ ವಿಚಾರಣೆ ನಡೆಸಲು ವಿಶಾಖಾ ಮಾರ್ಗಸೂಚಿಗಳಿಗೆ ಅನುಸಾರವಾಗಿ, ಆರು ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿದೆ. ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯಶ್ರೀ ರಘುನಂದನ್ ಅವರ ನೇತೃತ್ವದಲ್ಲಿ ಈ ಸಮಿತಿ ತನಿಖೆ ನಡೆಸಲಿದೆ ಎಂದು ಗೃಹ ಇಲಾಖೆಯ ಆದೇಶ ತಿಳಿಸಿದೆ.
ವಿರೋಧ ಪಕ್ಷದ ನಾಯಕ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಎಎಂಕೆ ಸರ್ಕಾರವು ಇಂಥ ತಪ್ಪಿತಸ್ಥ ಅಧಿಕಾರಿಗಳನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕೆಲವೇ ವಾರಗಳಲ್ಲಿ ಬರಲಿರುವ ತಮಿಳುನಾಡು ಮತ್ತು ಪುದುಚೇರಿಯ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಆಸ್ಪತ್ರೆಯ ಡ್ರೆಸ್ ಚೇಂಜಿಂಗ್ ರೂಮಲ್ಲಿ ಕ್ಯಾಮೆರಾ! ಮೊಬೈಲ್ ಚಾರ್ಜ್​ಗೆ ಹಾಕಿ ರೆಕಾರ್ಡಿಂಗ್!

ಮಾರ್ಚ್​ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ, ಆಯ್ದ 45 ಮೇಲ್ಪಟ್ಟವರಿಗೆ ಕರೊನಾ ಲಸಿಕೆ ಲಭ್ಯ

ಅಜೀಂ ಪ್ರೇಮ್​​ಜಿ ಹಿಂದೆ ಬಿದ್ದ ಎನ್​ಜಿಒಗೆ 10 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 9 =
Remember me
