ಶ್ರೀನಗರ:ಇಂದು ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಉಗ್ರರ ದಾಳಿಗೆ ಸಿಆರ್​ಪಿಎಫ್​ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್​ ಹುತಾತ್ಮರಾಗಿದ್ದಾರೆ.
ಇದರ ಬೆನ್ನಲ್ಲೇ ಭಾರತೀಯ ಯೋಧರು ಲಷ್ಕರ್​ ಎ ತೊಯ್ಬಾದ ಉನ್ನತ ಕಮಾಂಡರ್​ ಸಜ್ಜಾದ್​​ನನ್ನು ಕೊಂದು ಹಾಕಿದ್ದಾರೆ. ಈ ಬಗ್ಗೆ ಜಮ್ಮುಕಾಶ್ಮೀರದ ಐಜಿ ವಿಜಯ್​ಕುಮಾರ್​ ಅವರು ಮಾಹಿತಿ ನೀಡಿದ್ದು, ಲಷ್ಕರ್​ ಎ ತೊಯ್ಬಾದ ಸಜ್ಜಾದ್​ ಅಲಿಯಾಸ್​ ಹೈದರ್​​ನನ್ನು ಹತ್ಯೆ ಮಾಡಲಾಗಿದೆ. ಇದು ಭದ್ರತಾ ಪಡೆ ಮತ್ತು ಪೊಲೀಸರ ಮಹತ್ವದ ಸಾಧನೆ ಎಂದು ಹೇಳಿದ್ದಾರೆ.ಇದನ್ನೂ ಓದಿ:ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ ಹೆಚ್ಚುತ್ತಿದೆ ಭಯ; ಇಂದು ನಾಲ್ವರು ರಾಜೀನಾಮೆ
ಸಜ್ಜದ್​ ಹಾಗೂ ಇನ್ನೋರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಮೃತರ ಬಳಿ ಇದ್ದ ಒಂದು ಎಕೆ ರೈಫಲ್​ ಮತ್ತು ಎರಡು ಪಿಸ್ತೂಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಉಗ್ರನಿಗಾಗಿ ಹುಡುಕಾಟ ನಡೆದಿದೆ ಎಂದು ಸಿಆರ್​ಪಿಎಫ್ ತಿಳಿಸಿದೆ.ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಇಂದು ಬೆಳಗ್ಗೆಯಿಂದಲೂ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. (ಏಜೆನ್ಸೀಸ್​)
ಕಾಶ್ಮೀರದಲ್ಲಿ ಉಗ್ರ ದಾಳಿಗೆ ಮೂವರು ಯೋಧರು ಹುತಾತ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 1 =
Remember me
