ಭೋಪಾಲ್​:ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಬಿಜೆಪಿ ಕಂಟಕವಾಗಿ ಕಾಡಲಾರಂಭಿಸಿದೆ. ಜ್ಯೋತಿರಾದಿತ್ಯ ಸಿಂಧ್ಯಾ ರಾಜೀನಾಮೆ ಕಾಂಗ್ರೆಸ್​ ಪಕ್ಷಕ್ಕೆ ನೀಡದ ಬೆನ್ನಲ್ಲೇ 19 ಶಾಸಕರು ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಶಾಸಕ ಅದಾಲ್​ ಸಿಂಗ್​ ಕನ್ಸಾನ್​ ಮತ್ತು ಮನೋಜ್​ ಚೌಧರಿ ರಾಜೀನಾಮೆ ಸಲ್ಲಿಸಿದ್ದು ಪಕ್ಷ ತೊರೆದ ಶಾಸಕರ ಸಂಖ್ಯೆ 22ಕ್ಕೆ ಏರಿದೆ.
ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧ್ಯಾ ಸೋಮವಾರ ರಾತ್ರಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ವಿಚಾರವನ್ನು ಟ್ವೀಟ್​ ಮೂಲಕ ಬಹಿರಂಗಪಡಿಸಿದ್ದರು. ಅದರ ಬೆನ್ನಲ್ಲೇ 19 ಶಾಸಕರು ಬೆಂಗಳೂರಿನಲ್ಲಿ ಇದ್ದುಕೊಂಡೇ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯದ ವಿಧಾನಸಭೆಯ ಸ್ಪೀಕರ್​ಗೆ ರವಾನಿಸಿದ್ದರು. ಇದೀಗ ಶಾಸಕ ಮನೋಜ್​ ಚೌಧರಿ ಮತ್ತು ಅದಾಲ್​ ಸಿಂಗ್​ ಕನ್ಸಾನ್​ ಕೂಡ ರಾಜೀನಾಮೆ ಸಲ್ಲಿಸಿರುವುದಾಗಿ ಮಾಹಿತಿ ಲಭಿಸಿದೆ.
ಶಾಸಕರ ಈ ನಡೆಯೊಂದಿಗೆ ಕಮಲನಾಥ ಸರ್ಕಾರದ ಬಹುಮತ ಕುಸಿದಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ 228 ಶಾಸಕರಿದ್ದು, ಈ ಪೈಕಿ ಬಿಜೆಪಿಗೆ 109, ಬಿಎಸ್​ಪಿ 2, ಸಮಾಜವಾದಿ ಪಕ್ಷ 1, ಪಕ್ಷೇತರ 4 ಸದಸ್ಯರಿದ್ದಾರೆ. ಆಡಳಿತ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್​ಗೆ 114 ಸದಸ್ಯಬಲ ಇತ್ತು. ಈಗ 22 ಶಾಸಕರ ರಾಜೀನಾಮೆಯೊಂದಿಗೆ ಕಾಂಗ್ರೆಸ್ ಸದಸ್ಯ ಬಲ 93ಕ್ಕೆ ಕುಸಿದಿದೆ.(ಏಜೆನ್ಸೀಸ್​)
ಸಿಂಧ್ಯಾ ರಾಜೀನಾಮೆ ನೀಡುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಅಚ್ಚರಿಯ ಕ್ರಮ; ಟ್ವಿಟರ್​ ಮೂಲಕ ಘೋಷಣೆ

ಬೆಂಗಳೂರಿನಲ್ಲಿ ಇದ್ದುಕೊಂಡೇ ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್​ಗೆ ರಾಜೀನಾಮೆ ಪತ್ರ ರವಾನಿಸಿದ 19 ಕಾಂಗ್ರೆಸ್ ಶಾಸಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 18 =
Remember me
