ಪಣಜಿ:ಓಲ್ಡ್ ಗೋವಾದ ಚರ್ಚ್‌ನಲ್ಲಿ ಭದ್ರತಾ ಸಿಬ್ಬಂದಿಗೆ (ಸೆಕ್ಯೂರಿಟಿ ಗಾರ್ಡ್) ಚಪ್ಪಲಿಯಿಂದ ಮಹಿಳೆಯೊಬ್ಬರು ಹೊಡೆದಿರುವ ವಿಡಿಯೋ ವೈರಲ್ ಆಗಿದ್ದು ಆ ಪ್ರವಾಸಿಯ ವಿರುದ್ಧ ಗೋವಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಚರ್ಚ್ ಗೇಟ್ ಬಳಿ ಮಹಿಳೆ ಭದ್ರತಾ ಸಿಬ್ಬಂದಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದು ನಂತರ ಒಬ್ಬರಿಗೆ ಚಪ್ಪಲಿಯಲ್ಲಿ ಹೊಡೆದ ಘಟನೆಯ ವೀಡಿಯೊ ವೈರಲ್​ ಆದ ನಂತರ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೂಲಗಳ ಪ್ರಕಾರ, ಚರ್ಚ್ ಆವರಣಕ್ಕೆ ಪ್ರವೇಶಿಸಲು ನಿಗದಿತ ಸಮಯದಲ್ಲಿ ಮಾತ್ರ ಅನುಮತಿಸಲಾಗಿದ್ದು ಈ ವಿಚಾರವಾಗಿ ಮಹಿಳೆ ಮತ್ತು ಭದ್ರತಾ ಸಿಬ್ಬಂದಿ ನಡುವಿನ ವಾಗ್ವಾದ ಉಂಟಾಗಿದೆ.
Police file non cognizable case against woman tourist who hit a security guard with a sandal at Old Goapic.twitter.com/7rXuRh61ac— Dev walavalkar (@walavalkar)March 13, 2023
Police file non cognizable case against woman tourist who hit a security guard with a sandal at Old Goapic.twitter.com/7rXuRh61ac
ಈ ಘಟನೆ ಕುರಿತು ಸೋಮವಾರ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಪ್ರವಾಸಿಗರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ. “ಹಳೆ ಗೋವಾದಲ್ಲಿ ಸಂಭವಿಸಿದ ಈ ಘಟನೆಯಲ್ಲಿ, ಮಹಿಳೆ ಭದ್ರತಾ ಸಿಬ್ಬಂದಿ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಲು ಪ್ರಯತ್ನಿಸಿದರು. ಅಂತಹ ಘಟನೆಗಳನ್ನು ನಾವು ಸಹಿಸುವುದಿಲ್ಲ. ನಾನ್ ಕಾಗ್ನಿಜಬಲ್ ಅಪರಾಧವನ್ನು ಮಹಿಳೆ ವಿರುದ್ಧ ದಾಖಲಿಸಲಾಗಿದ್ದು ಪೊಲೀಸರು ಆ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದರು.
“ಪ್ರವಾಸಿಗರು ಗೋವಾದ ಕಾನೂನನ್ನು ಅನುಸರಿಸಬೇಕು. ಪ್ರವಾಸಿಗರು ಸೂಕ್ತ ಕಚೇರಿಯಲ್ಲಿ ದೂರು ನೀಡಿದರೆ ನಾವು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅಂತಹ ಯಾವುದೇ ಸಂದರ್ಭಗಳನ್ನು ನಿಭಾಯಿಸಲು ಪೊಲೀಸರು ಸಮರ್ಥರಾಗಿದ್ದಾರೆ” ಎಂದು ಅವರು ಹೇಳಿದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
