ಕೊಟ್ಟಾಯಂ:ಯಾವುದಾದರೂ ಸ್ಥಳಕ್ಕೆ ಹೋಗಬೇಕಾದಾಗ, ಯಾವುದಾದರೂ ಸ್ಥಳವನ್ನು ನೋಡಿ ತಿಳಿಯಬೇಕಾದಾಗ ಸಾಮಾನ್ಯವಾಗಿ ನಾವೆಲ್ಲ ಒಂದಲ್ಲ ಒಂದು ಸಲ ಗೂಗಲ್ ಮ್ಯಾಪ್​, ಗೂಗಲ್​ ಸರ್ಚ್​ನ ಮೊರೆ ಹೋಗುತ್ತೇವೆ. ಅದರಲ್ಲೂ ಗೂಗಲ್​ ಮ್ಯಾಪ್ ಹೆಚ್ಚಾಗಿ ಬಳಕೆ ಮಾಡುತ್ತೇವೆ. ಆದರೆ, ಗೂಗಲ್​ ಮ್ಯಾಪ್​ ಬಳಸುವಾಗ ಸ್ವಲ್ಪ ಎಚ್ಚರ ತಪ್ಪಿದರೆ ಏನಾಗಬಹುದು ಎಂಬುದಕ್ಕೆ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ನಡೆದಿದೆ.
ಕೊಟ್ಟಾಯಂ ಜಿಲ್ಲೆಯ ಕುರುಪಂಥರಾ ಪ್ರದೇಶದಲ್ಲಿ ಶನಿವಾರ ಬೆಳಗಿನ 03 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶ ಮೂಲದ ನಾಲ್ವರು ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ. ನೀರಿನಲ್ಲಿ ಮುಳುಗಿರುವ ಕಾರನ್ನು ಅಧಿಕಾರಿಗಳು ಹೊರತೆಗೆಯುತ್ತಿದ್ದಾರೆ.
ಇದನ್ನೂ ಓದಿ:ಉಡುಪಿಯಲ್ಲಿ ಗುಂಪುಗಳ ನಡುವೆ ಡೆಡ್ಲಿ ಗ್ಯಾಂಗ್​ವಾರ್​; ಭಯಾನಕ ವಿಡಿಯೋ ವೈರಲ್​
ಈ ಕುರಿತು ಪ್ರತಿಕ್ರಿಯಿಸಿರುವ ಕೊಟ್ಟಾಯಂ ವಿಭಾಗದ ಪೊಲೀಸ್​ ಅಧಿಕಾರಿಯೊಬ್ಬರು, ಆಂಧ್ರಪ್ರದೇಶದಿಂದ ಅಲಪ್ಪುರಕ್ಕೆ ನಾಲ್ವರು ಪ್ರಯಾಣಿಸುತ್ತಿದ್ದರು. ಹೆಚ್ಚಾಗಿ ಮಳೆ ಸುರಿದಿದ್ದ ಕಾರಣ ಗೂಗಲ್​ ಮ್ಯಾಪ್​ ಸೂಚಿಸಿದ ವೇಗದ ಮಾರ್ಗವನ್ನು ಅನುಸರಿಸಲು ಹೋಗಿ ಎಸ್​ಯುವಿ ಕಾರೊಂದು ರಸ್ತೆಯನ್ನು ಬಿಟ್ಟು ನೀರಿಗೆ ಇಳಿದಿದೆ.
ಕಾರು ನೀರಿನಲ್ಲಿ ಮುಳುಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಕಾರು ನೀರಿನಲ್ಲಿ ಸಂಫೂರ್ಣವಾಗಿ ಮುಳುಗಿದ್ದು, ಹೊರತೆಗೆಯಲಾಗುತ್ತಿದೆ ಎಂದು ಕೊಟ್ಟಾಯಂ ವಿಭಾಗದ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:13 + 14 =
Remember me
