ಬೆಂಗಳೂರು:ಭಾರತದ ಆಟೋಮೋಟಿವ್ ಉದ್ಯಮದ ದಿಗ್ಗಜ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್(64) ಹೃದಯಾಘಾತದಿಂದ ನಿಧನರಾದರು.
ವಿಕ್ರಮ್​ ಅವರು ಮಂಗಳವಾರ ಬೆಳಗ್ಗೆ ಎದೆನೋವಿನಿಂದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದರು. ಕೂಡಲೇ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ರಂ ಅವರನ್ನು ಉಳಿಸಿಕೊಳ್ಳಲು ವೈದ್ಯರ ತಂಡ ಪ್ರಯತ್ನಿಸಿತ್ತಾದರೂ ಹೃದಯಾಘಾತದಿಂದ ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
‘2022ರ ನವೆಂಬರ್​ 29ರಂದು ಟೊಯೊಟಾ ಕಿರ್ಲೋಸ್ಕರ್​ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್​ ಅವರ ಅಕಾಲಿಕ ನಿಧನ ತೀವ್ರ ದುಃಖವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಲು ಎಲ್ಲರಿಗೂ ಕೋರುತ್ತೇವೆ. ನ.30ರ ಮಧ್ಯಾಹ್ನ ಬೆಂಗಳೂರಿನ ಹೆಬ್ಬಾಳ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಕಂಪನಿ ಪ್ರಕಟಣೆ ತಿಳಿಸಿದೆ.
ವಿಕ್ರಂ ಕಿರ್ಲೋಸ್ಕರ್​ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ‘ಭಾರತದ ಆಟೋಮೋಟಿವ್ ಉದ್ಯಮದ ದಿಗ್ಗಜರಲ್ಲಿ ಒಬ್ಬರಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಂ ಕಿರ್ಲೋಸ್ಕರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಅವರ ಆತ್ಮಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವು ತಡೆಯುವ ಶಕ್ತಿಯನ್ನು ದೇವರು ಕುಟುಂಬ ಮತ್ತು ಸ್ನೇಹಿತರಿಗೆ ನೀಡಲಿ’ ಎಂದು ಟ್ವೀಟ್​ ಮಾಡಿದ್ದಾರೆ.
Heartfelt condolences on the sad & untimely demise of one of the stalwarts of India's automotive industry, Vice Chairperson of Toyota Kirloskar Motor, Shri Vikram Kirloskar. May his soul rest in peace. May God grant the family & friends the strength to bear this loss.
Om Shanti.pic.twitter.com/R6sxB3NCwm
— Basavaraj S Bommai (@BSBommai)November 30, 2022

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eleven =
Remember me
