ಆಂಧ್ರಪ್ರದೇಶ:ಗುಂಟೂರು ಜಿಲ್ಲೆಯಲ್ಲಿ ವಟ್ಟಿಚೆರುಕೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಹಳ್ಳಕ್ಕೆ ನುಗ್ಗಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಈ ದುರ್ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಾಗ ಮೂವರು ಸಾವನ್ನಪ್ಪಿದ್ದಾರೆ. ಗುಂಟೂರು ಜಿಜಿಎಚ್‌ಗೆ ರವಾನಿಸಲಾಗಿದೆ. ಅಪಘಾತದ ವೇಳೆ ಟ್ರ್ಯಾಕ್ಟರ್‌ನಲ್ಲಿ 40 ಜನರಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ನಿಗಮ-ಮಂಡಳಿ ಲೆಕ್ಕಾಚಾರ ಶುರು: ಪ್ರಮುಖರ ಮೇಲೆ ಆಕಾಂಕ್ಷಿಗಳ ಒತ್ತಡ; ಬಜೆಟ್ ಮಂಡನೆ ಬಳಿಕ ನೇಮಕ ಪ್ರಕ್ರಿಯೆ
ಇವರೆಲ್ಲರೂ ಶುಭ ಕಾರ್ಯದ ನಿಮಿತ್ತ ಚೇಬ್ರೋಳು ಮಂಡಲದ ಜುಪುಡಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಟ್ಟಿಪಾಡು ಮಂಡಲದ ಕೊಂಡೆಪಾಡು ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
