ಕೇರಳ:ತನ್ನ ಬಾಯ್​ಫ್ರೆಂಡ್​ ಜೊತೆ ರಾತ್ರಿ ಮದ್ಯಪಾನ ಕುಡಿದ್ದು ಮಲಗಿದ್ದ ಯುವತಿ. ಬೆಳಗ್ಗಿನ ಹೊತ್ತಿಗೆ ಯುವತಿ ಸಾವನ್ನಪ್ಪಿದ್ದಾಳೆ. ಪೊಲೀಸರು ಪ್ರಿಯಕರನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಮನೆ ಮೇಲ್ಛಾವಣಿ ಉಚಿತ ವಿದ್ಯುತ್​ ಪ್ರಯೋಜನಾ ಪಡೆಯಲು pmsuryaghar.gov.in ಅರ್ಜಿ ಸಲ್ಲಿಸಿ
ಆಕಾಶ್ (20) ನೀಲಗಿರಿ ಜಿಲ್ಲೆಯ ಊಟಿಯ ಬಾಂಬೆ ಕ್ಯಾಸಲ್ ನಿವಾಸಿ. ಆಕಾಶ್ ಅಜ್ಜಿಯೊಂದಿಗೆ ವಾಸವಾಗಿದ್ದ. ಆತನ ಗೆಳತಿ ರಿತಿ ಏಂಜೆಲ್ (19) ಊಟಿಯ ಪಿಂಕರ್ ಪೋಸ್ಟ್ ಮೂಲದವಳು. ಇವರಿಬ್ಬರು 10ನೇ ತರಗತಿಯಲ್ಲಿ ಒಟ್ಟಿಗೆ ಓದಿದ್ದರಿಂದ ಪರಿಚಯವಾಗಿ ಪ್ರೀತಿಯಲ್ಲಿದ್ದರು.
ಈ ಮಧ್ಯೆ ರಿತಿ ಏಂಜೆಲ್ ಕೊಯಮತ್ತೂರಿನ ಖಾಸಗಿ ನರ್ಸಿಂಗ್ ಕಾಲೇಜಿಗೆ ಮತ್ತು ಆಕಾಶ್ ನೀಲಗಿರಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿಕೊಂಡಿದ್ದ. ಪ್ರೇಮಿಗಳು ಸಮಯ ಸಿಕ್ಕಾಗೆಲ್ಲಾ ಭೇಟಿಯಾಗಿ ತಿರುಗಾಡುತ್ತಿದ್ದರು.
ಕಳೆದ ಶನಿವಾರ ಕಾಲೇಜಿಗೆ ರಜೆ ಇದ್ದು, ಗೆಳೆಯನ ಮನವಿಯಂತೆ ಕೊಯಮತ್ತೂರಿನಿಂದ ರಿತಿ ಏಂಜೆಲ್ ಬಂದಿದ್ದಳು. ಅಲ್ಲಿ ಟಾಸ್ಮಾಕ್ ಬಾರ್ ನಲ್ಲಿ ಮದ್ಯ ಖರೀದಿಸಿದ ಬಳಿಕ ವಿದ್ಯಾರ್ಥಿನಿಯನ್ನು ಗೆಳೆಯ ದ್ವಿಚಕ್ರ ವಾಹನದಲ್ಲಿ ಹತ್ತಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ.
ಅವರು ಆನ್‌ಲೈನ್‌ನಲ್ಲಿ ಆಹಾರವನ್ನು ಬುಕ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಆಕಾಶ್ ಮತ್ತು ರಿತಿ ಏಂಜೆಲ್ ಮದ್ಯ ಸೇವಿಸಿದ್ದಾರೆ. ಇದಾದ ಬಳಿಕ ಮೋಟಾರ್ ಸೈಕಲ್ ನಲ್ಲಿ ಸಮೀಪದ ಪೈನ್ ಅರಣ್ಯ ಪ್ರದೇಶಕ್ಕೆ ತೆರಳಿ ಮ್ಯಾಜಿಕ್ ಮಶ್ರೂಮ್ ಗಳನ್ನು ತೆಗೆದುಕೊಂಡು ವೈನ್ ಸಮೇತ ತಿಂದಿದ್ದಾರೆ. ಇದರಿಂದ ಇಬ್ಬರೂ ಮಾದಕ ವ್ಯಸನಕ್ಕೆ ಒಳಗಾಗಿ ಗೊಂದಲದ ಗೂಡಾಗಿದ್ದಾರೆ. ನಂತರ ಇಬ್ಬರೂ ನಿದ್ರೆಗೆ ಜಾರಿದ್ದಾರೆ.
ಬೆಳಗ್ಗೆ ಎದ್ದ ಆಕಾಶ್ ರಿತಿ ಏಂಜೆಲ್ ಹಾಸಿಗೆಯಿಂದ ಏಳದಿರುವುದನ್ನು ಕಂಡು ಶಾಕ್ ಆಗಿದ್ದಾನೆ. ರಿತಿ ಏಂಜೆಲ್ ಎಬ್ಬಿಸಿದರೂ ಏಳದ ಕಾರಣ ಆಂಬ್ಯುಲೆನ್ಸ್ ಗಾಗಿ 108ಕ್ಕೆ ಕರೆ ಮಾಡಿದ್ದಾರೆ. ವೈದ್ಯರು ಯುವತಿಯನ್ನು ಪರೀಕ್ಷಿಸಿ ಆಕೆ ಮೃತಪಟ್ಟಿರುವ ಬಗ್ಗೆ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಊಟಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕಾಶ್ ನನ್ನು ಬಂಧಿಸಿದ್ದಾರೆ. ರಿತಿ ಏಂಜೆಲ್ ಸಾವಿನ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ.

ಮನೆ ಮೇಲ್ಛಾವಣಿ ಉಚಿತ ವಿದ್ಯುತ್​ ಪ್ರಯೋಜನಾ ಪಡೆಯಲು pmsuryaghar.gov.in ಅರ್ಜಿ ಸಲ್ಲಿಸಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 3 =
Remember me
