ಚೆನ್ನೈ:ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತೋಪ್ಪುರ್​ ಘಾಟ್​ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅತಿ ವೇಗದ ಟ್ರಕ್ ನಿಯಂತ್ರಣ ಕಳೆದುಕೊಂಡು​ ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಟ್ರಕ್​ಗಳ ನಡುವೆ ಕಾರು ಸಿಕ್ಕಿಕ್ಕೊಂಡು ಭಯಾನಕ ಅಪಘಾತ ಸಂಭವಿಸಿದೆ. ಒಟ್ಟು ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸ್ಥಳದಲ್ಲೇ ನಜ್ಜುಗುಜ್ಜಾಗಿದ್ದು, ಟ್ರಕ್ ರೈಲಿಂಗ್‌ಗೆ ಡಿಕ್ಕಿ ಹೊಡೆದು ಸೇತುವೆಯಿಂದ ಪಲ್ಟಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ತಕ್ಷಣವೇ ಆರ್ಥಿಕ ನೆರವು ಘೋಷಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ಪರಿಹಾರ ಘೋಷಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಪ್ರಾರಂಭಿಸಲಾಯಿತು. ಅಗ್ನಿಶಾಮಕ ದಳ ಮತ್ತು ಇತರ ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಎಲ್ಲ ಮೂರು ವಾಹನಗಳಲ್ಲಿ ಬೆಂಕಿ ಸಹ ಕಾಣಿಸಿಕೊಂಡಿದೆ.
ಇಂತಹ ಅಪಘಾತಗಳನ್ನು ತಡೆಯಲು ಎಲಿವೇಟೆಡ್ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಧರ್ಮಪುರಿ ಸಂಸದ ಮತ್ತು ಡಿಎಂಕೆ ಮುಖಂಡರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.(ಏಜೆನ್ಸೀಸ್​)
ವಿಜಯಲಕ್ಷ್ಮೀಗೆ ಟಾಂಗ್​​ ಕೊಡಲು ಹೋಗಿ ಇಕ್ಕಟ್ಟಿಗೆ ಸಿಲುಕಿದ ಪವಿತ್ರಾ! ಮುಚ್ಚಿಟ್ಟಿದ್ದ ರಹಸ್ಯ ಬಯಲು

ದರ್ಶನ್​ ಜತೆ 10 ವರ್ಷದಿಂದ ಸಂಬಂಧ; ವಿವಾದ ಹುಟ್ಟುಹಾಕಿದ ಈ ಪವಿತ್ರಾ ಗೌಡ ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
