ಅಮರಾವತಿ:ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಬೋಗಿಗಳು ಬೆಂಕಿಗಾಹುತಿಯಾಗಿದೆ. ಕೊರ್ಬಾ-ವಿಶಾಖಾ ಎಕ್ಸ್​ಪ್ರೆಸ್​ ರೈಲಿನ ಮೂರು ಹವಾನಿಯಂತ್ರಿತ ಕೋಚ್​ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪಶ್ಚಿಮಘಟ್ಟ ಪ್ರದೇಶಗಳಲ್ಲಿನ ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ತೆರವು!
ಕೊರ್ಬಾ-ವಿಶಾಖಪಟ್ಟಣಂ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಿಂತಿದ್ದ ರೈಲಾಗಿದ್ದರಿಂದ ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಪ್ರಯಾಣಿಕರೆಲ್ಲಾ ಇಳಿದಿದ್ದರು. ರೈಲಿನ ಬಿ6, ಬಿ7, ಎಂ1 ಬೋಗಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಭಾರಿ ಬೆಂಕಿ ಅವಘಡದಿಂದ ರೈಲ್ವೆ ನಿಲ್ದಾಣದ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ಕೂಡಲೇ ಎಚ್ಚೆತ್ತು ಬೆಂಕಿ ನಂದಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ಬೆಳಗ್ಗೆ ಛತ್ತೀಸ್‌ಗಢದ ಕೊರ್ಬಾದಿಂದ ಪ್ಲಾಟ್‌ಫಾರ್ಮ್ ನಂಬರ್ ನಾಲ್ಕಕ್ಕೆ ಬಂದಿತ್ತು ಮತ್ತು ನಂತರ ತಿರುಪತಿಗೆ ಹೊರಡಬೇಕಿತ್ತು. ಕೊರ್ಬಾ ಎಕ್ಸ್‌ಪ್ರೆಸ್ ಬೆಳಿಗ್ಗೆ 6.30 ಕ್ಕೆ ಬಂದಿತು ಮತ್ತು ಕೋಚಿಂಗ್ ಡಿಪೋಗೆ ನಿರ್ವಹಣೆಗಾಗಿ ಹೋಗಬೇಕಾಗಿತ್ತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿಗೆ ಬೀಗ ಹಾಕಲಾಗಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದರು.
ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಫಕೀರಪ್ಪ ತಿಳಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಹಾನಿಗೊಳಗಾದ ಬೋಗಿಗಳನ್ನು ಹೊರತುಪಡಿಸಿ, ರೈಲ್ವೇ ಸಿಬ್ಬಂದಿ ನಿರ್ವಹಣೆಗಾಗಿ ರೈಲನ್ನು ಡಿಪೋಗೆ ಸ್ಥಳಾಂತರಿಸಿದರು.
ಕೋಚ್‌ಗಳಲ್ಲಿ ದಹನಕಾರಿ ವಸ್ತುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಸ್ವಲ್ಪ ಸಮಯ ತೆಗೆದುಕೊಂಡರು ಜಂಟಿ ಪೊಲೀಸ್ ಆಯುಕ್ತ ಫಕೀರಪ್ಪ ಮಾಹಿತಿ ನೀಡಿದ್ದಾರೆ.
ನಿಮ್ಮೊಂದಿಗೆ ನಾವಿದ್ದೇವೆ, ಎದೆಗುಂದಬೇಡಿ: ಮೃತ ಪಿಎಸ್ಐ ಕುಟುಂಬಕ್ಕೆ ಧೈರ್ಯ ತುಂಬಿದ ಆರ್​. ಅಶೋಕ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three + six =
Remember me
