ನವದೆಹಲಿ:ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯಲ್ಲಿ (ಸಿಎಪಿಎಫ್) ತೃತೀಯ ಲಿಂಗಿಗಳನ್ನು ನೇಮಿಸಿಕೊಳ್ಳುವ ಐತಿಹಾಸಿಕ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ಚಾಲನೆ ನೀಡಿದ್ದು, ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್​ಸಿ) ಇದಕ್ಕೆ ಅವಕಾಶ ನೀಡಲು ಚಿಂತನೆ ನಡೆಸುತ್ತಿದೆ.
ಕೇಂದ್ರದ ಕ್ರಮದಿಂದಾಗಿ ತೃತೀಯ ಲಿಂಗಿಗಳೂ ಇನ್ನು ಮುಂದೆ ಕೇಂದ್ರೀಯ ಅರೆಸೇನಾ ಪಡೆಗಳಲ್ಲಿ ಮುಂಚೂಣಿ ನಾಯಕತ್ವ ವಹಿಸುವುದಕ್ಕೆ ಅವಕಾಶ ಲಭ್ಯವಾಗಲಿದೆ.
ದೇಶದ ವಿವಿಧ ಭಾಗಗಳಲ್ಲಿ ಆಂತರಿಕ ಭದ್ರತಾ ಕಾರ್ಯಗಳಲ್ಲಿ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಲು ಅನುವಾಗುವಂತೆ ಯುಪಿಎಸ್​ಸಿ ಪರೀಕ್ಷೆಗಳಿಗೆ ಹಾಜರಾಗಲು ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಆಲೋಚನೆ ಮಾಡುತ್ತಿದೆ. ಕೇಂದ್ರ ಸರ್ಕಾರ ಕಳೆದ ವರ್ಷ ಡಿಸೆಂಬರ್​ನಲ್ಲಿ ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಕಾನೂನಿನ ಅಧಿಸೂಚನೆ ಹೊರಡಿಸಿರು ವುದರಿಂದ ತೃತೀಯ ಲಿಂಗಿಗಳಿಗೆ ಎಲ್ಲ ಕ್ಷೇತ್ರಗಳಲ್ಲಿ ಹಾಗೂ ಸೇವೆಗಳಲ್ಲಿ ‘ಸಮಾನ ಅವಕಾಶ ಕಲ್ಪಿಸುವುದು’ ಅಗತ್ಯವಾಗಿದೆ.
ಅಭಿಪ್ರಾಯ ಕೋರಿಕೆ:ತೃತೀಯ ಲಿಂಗಿಗಳ ಸೇರ್ಪಡೆಗೆ ಆಕ್ಷೇಪವಿದೆಯೇ ಇಲ್ಲವೇ ಎನ್ನುವುದನ್ನು ತಿಳಿಸುವಂತೆ ಗೃಹ ಸಚಿವಾಲಯ, ಐದೂ ಅರೆಸೇನೆ ಅಥವಾ ಸಿಎಪಿಎಫ್​ಗಳಿಗೆ ಸೂಚನೆ ನೀಡಿದೆ. ಯುಪಿಎಸ್​ಸಿ ಅರ್ಜಿಗಳಲ್ಲಿ ಪುರುಷ, ಮಹಿಳೆ ಅಂಕಣದ ಜೊತೆ ‘ತೃತೀಯ ಲಿಂಗಿ’ ಅಂಕಣ ನಮೂದಿಸಲಾತ್ತದೆ.
ಮೊದಲ ಪ್ರಕರಣ
2017ರಲ್ಲಿ ತಮಿಳುನಾಡಿನಲ್ಲಿ ಕೆ. ಪ್ರತೀಕಾ ಯಾಶಿನಿ ಎಂಬುವವರು ಪೊಲೀಸ್ ಇಲಾಖೆಗೆ ಸೇರಿದ್ದು ತೃತೀಯ ಲಿಂಗಿಯೋರ್ವರು ಪೊಲೀಸ್ ಪಡೆಗಳಿಗೆ ಸೇರ್ಪಡೆಯಾದ ಮೊತ್ತ ಮೊದಲ ಪ್ರಕರಣವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − four =
Remember me
