ರಾಯಗಢ, ಮಹಾರಾಷ್ಟ್ರ:ಶನಿವಾರ (ಡಿ.30) ಬೆಳಗ್ಗೆ 7.30ರ ಸುಮಾರಿಗೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 55 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಮಂಗಾವ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಗಡದ ತಮ್ಹಾನಿ ಘಾಟ್ ಪ್ರದೇಶದಲ್ಲಿ ವರದಿಯಾಗಿದೆ.
ಇದನ್ನೂ ಓದಿ:Bank Locker Agreement:: ಜನವರಿ 1 ರಿಂದ ಈ ನಿಯಮಗಳು ಬದಲಾಗಲಿವೆ
ಘಟನೆ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಬಸ್ ತಮ್ಹಾನಿ ಘಾಟ್‌ನ ಗುಡ್ಡಗಾಡು ಪ್ರದೇಶದಲ್ಲಿ ಪಲ್ಟಿಯಾಗಿರುವುದನ್ನು ಪರಿಶೀಲಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದು ಸದ್ಯದ ಮಟ್ಟಿಗೆ ತಿಳಿದುಬಂದಿಲ್ಲ. ಘಾಟ್​ ರಸ್ತೆ ಆದ ಕಾರಣ ತಿರುವುಗಳಲ್ಲಿ ಚಾಲಕರು ನಿಯಂತ್ರಣ ಕಳೆದುಕೊಳ್ಳುತ್ತಿರುವ ಹಿನ್ನೆಲೆ ಈ ರೀತಿಯ ಅಪಘಾತಗಳು ಪದೇ ಪದೇ ಸಂಭವಿಸುತ್ತಿವೆ ಎಂದು ಹೇಳಲಾಗಿದೆ.
ಇದನ್ನೂ ಓದಿ:BBKS10: ನಿಮ್ಮ ಪ್ರಕಾರ ಈ ವಾರ ಮನೆಯಿಂದ ಎಲಿಮಿನೇಟ್ ಆಗೋರು ಯಾರು? ಕಮೆಂಟ್ ಮಾಡಿ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಇಂತಹ ಅಪಘಾತ ಸಂಭವಿಸಿರುವುದು ಇದೇ ಮೊದಲಲ್ಲ. ಏಪ್ರಿಲ್ 2023 ರಲ್ಲಿ, 42 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ 300 ಅಡಿ ಕಮರಿಗೆ ಬಿದ್ದಿತು. ಐವರು ಅಪ್ರಾಪ್ತರು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದ್ದರು ಮತ್ತು 29ಕ್ಕೂ ಅಧಿಕ ಜನರು ಗಾಯಗೊಂಡಿದ್ದರು,(ಏಜೆನ್ಸೀಸ್).
Maharashtra | Two people died and 55 got injured after a travel bus overturned in the Tamhani Ghat area of Raigad under the Mangaon police station area at around 7.30 am today. The injured were taken to the nearest hospital for treatment: SP Raigad, Somnath Ghargepic.twitter.com/zyXvMS4vAf
— ANI (@ANI)December 30, 2023

BBKS10: ನಿಮ್ಮ ಪ್ರಕಾರ ಈ ವಾರ ಮನೆಯಿಂದ ಎಲಿಮಿನೇಟ್ ಆಗೋರು ಯಾರು? ಕಮೆಂಟ್ ಮಾಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
