ನವದೆಹಲಿ:ಇಂದು ರಾತ್ರಿಯ ಸುಮಾರಿಗೆ ಸಂಭವಿಸಿದ ಭೂಕಂಪ ರಾಷ್ಟ್ರದ ರಾಜಧಾನಿಯನ್ನು ನಡುಗಿಸಿದೆ. ಪರಿಣಾಮವಾಗಿ ದೆಹಲಿಯ ಪ್ರಮುಖ ಭಾಗದ ಜನರು ನಿದ್ದೆಗೆಡುವಂತಾಗಿದೆ. ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ- ಎನ್​ಸಿಎಸ್​) ಮಾಹಿತಿ ನೀಡಿದೆ.
ರಾತ್ರಿ ಸುಮಾರು 9.30ರ ಸಮಯದಲ್ಲಿ ಈ ಭೂಕಂಪ ಸಂಭವಿಸಿದ್ದು, ದೆಹಲಿಯ ಎನ್​ಸಿಆರ್​, ಜಮ್ಮು-ಕಾಶ್ಮೀರ ಹಾಗೂ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಗಡಿಭಾಗಗಳಲ್ಲಿ ಕಂಪನ ಉಂಟಾಗಿದೆ. ಅಫ್ಘಾನಿಸ್ತಾನ ಭೂಕಂಪದ ಕೇಂದ್ರಬಿಂದುವಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 5.8 ದಾಖಲಾಗಿದೆ.
ಇಂದು ಬೆಳಗ್ಗೆ ಜಮ್ಮು-ಕಾಶ್ಮೀರದಲ್ಲೂ ಭೂಕಂಪ ಉಂಟಾಗಿದ್ದು, ಅದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.2 ದಾಖಲಾಗಿತ್ತು. ಭೂಮಿಯ 129 ಕಿ.ಮೀ. ಆಳದಲ್ಲಿ ಈ ಕಂಪನ ಸಂಭವಿಸಿತ್ತು ಎಂದು ಎನ್​ಸಿಎಸ್​ ತಿಳಿಸಿದೆ. ಬೆಳಗಿನ ಈ ಭೂಕಂಪದಲ್ಲಿ ಯಾವುದೇ ಸಾವು-ನೋವು ವರದಿ ಆಗಿಲ್ಲ. ರಾತ್ರಿ ಸಂಭವಿಸಿದ ಭೂಕಂಪದ ಪರಿಣಾಮದ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

ಇನ್ನು ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ದಾಖಲೆ; ಸಂಸತ್ತಲ್ಲಿ ಮಹತ್ವದ ಮಸೂದೆ ಅಂಗೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + four =
Remember me
