ತಮಿಳುನಾಡು:ಸ್ಯಾನಿಟರಿ ನ್ಯಾಪ್‌ಕಿನ್‌ಗಳಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಖದೀಮರನ್ನು ತಿರುಚ್ಚಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನ ಅಧಿಕಾರಿಗಳು ಪತ್ತೆ ಹಚ್ಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಿರುಚ್ಚಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನ ತಮಿಳುನಾಡು ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳಲ್ಲಿ ಬಚ್ಚಿಟ್ಟಿದ್ದ ಎರಡು ಚಿನ್ನದ ಪೇಸ್ಟ್ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಲಾಗಿದೆ. 37.58 ಲಕ್ಷ ರೂಪಾಯಿ ಮೌಲ್ಯದ 24 ಕೆ ಶುದ್ಧತೆಯ 612 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
37.58 ಲಕ್ಷ ರೂಪಾಯಿ ಮೌಲ್ಯ ಬೆಲೆ ಬಾಳುವ ಎರಡು ಪೇಸ್ಟ್​​ಗಳನ್ನು ನ್ಯಾಪ್‌ಕಿನ್‌ಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಚಿನ್ನವನ್ನು ಅಧಿಕಾರಿಗಳು ತೆಗೆಯುತ್ತಿರುವ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಖದೀಮರು ಯಾರು ? ಎಲ್ಲಿಂದ ಬಂದಿದ್ದಾರೆ ಎನ್ನುವ ಮಾಹಿತಿ ತಿಳಿದು ಬರಬೇಕಿದೆ.
#WATCH| Tamil Nadu: On Oct 20, the officers of Trichy Airport customs recovered 612 gm gold of 24K purity valued at Rs 37.58 lakh extracted from two gold paste packets that were concealed in sanitary napkins at Trichy airport: Customs
(Source: Customs)pic.twitter.com/KIiH5R4FWH
— ANI (@ANI)October 21, 2023

ಅಕ್ಟೋಬರ್ 17 ರಂದು ಕೂಡಾ ತಮಿಳುನಾಡಿನ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಏರ್ ಇಂಟೆಲಿಜೆನ್ಸ್ ಯುನಿಟ್ (ಎಐಯು) ಕೌಲಾಲಂಪುರದಿಂದ ಆಗಮಿಸಿದ ಪ್ರಯಾಣಿಕರಿಂದ 24 ಕ್ಯಾರಟ್‌ಗಳ ಶುದ್ಧ ಚಿನ್ನದ ಬಾರ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ .
ಪ್ರಯಾಣಿಕ ಗುದನಾಳದಲ್ಲಿ ಬಚ್ಚಿಟ್ಟ ಕ್ಯಾಪ್ಸುಲ್‌ಗಳಲ್ಲಿ ಇರಿಸಲಾಗಿದ್ದ ಚಿನ್ನದ ಪೇಸ್ಟ್‌ನಿಂದ ಚಿನ್ನದ ಬಾರ್ ಅನ್ನು ಹೊರತೆಗೆಯಲಾಗಿದೆ. ವಶಪಡಿಸಿಕೊಂಡ 717 ಗ್ರಾಂ ತೂಕದ ಚಿನ್ನದ ಬೆಲೆ 42.91 ಲಕ್ಷ ರೂ. ಎಂದು ಕಸ್ಟಮ್ಸ್ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
96 ವರ್ಷ ಹಳೆ ವಿಸ್ಕಿಯ ಬೆಲೆ ಎಷ್ಟು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 9 =
Remember me
