ಕೋಲ್ಕತ್ತಾ:ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಕ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ರಚನಾ ಬ್ಯಾನರ್ಜಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಸಿದ್ದು, ಸಂತ್ರಸ್ತೆಯ ಹೆಸರನ್ನು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಶ್ಚಿಮ ಬಂಗಾಳದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ:‘ತಕ್ಷಣ ಚಾರ್ಜ್ ಶೀಟ್ ಸಲ್ಲಿಸಿ, ಅಪರಾಧ ಸಾಬೀತುಪಡಿಸಿ’: ಸಿಎಂ ಮಮತಾಗೆ ಪತ್ರ ಬರೆದ ಎಎಪಿ ಸಂಸದ ಹರ್ಭಜನ್ ​
ಕೋಲ್ಕತ್ತಾ ಹೈಕೋರ್ಟ್ ವಕೀಲ ಶಯಾನ್ ಸಚಿನ್ ಬಸು ತೃಣಮೂಲ ಕಾಂಗ್ರೆಸ್ ಸಂಸದೆ ರಚನಾ ಬ್ಯಾನರ್ಜಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮೃತಳ ಹೆಸರನ್ನು ಹಲವು ಬಾರಿ ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತರ ಹೆಸರನ್ನು ಈ ರೀತಿ ಪುನರುಚ್ಚರಿಸುವುದು ಆಕೆಯ ಕುಟುಂಬದ ಸುರಕ್ಷತೆ ಮತ್ತು ಅವರ ಘನತೆಗೆ ಹೆಚ್ಚು ಅಪಾಯವನ್ನುಂಟುಮಾಡುತ್ತದೆ ಎಂದು ವಕೀಲರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇದಾದ ಬಳಿಕ ಸಂಸದೆ ಕ್ಷಮೆಯಾಚಿಸಿದ್ದು, ಸಾಮಾಜಿಕ ಜಾಲತಾಣಗಳಿಂದ ವಿಡಿಯೋ ಡಿಲೀಟ್ ಮಾಡುವಂತೆ ಒತ್ತಾಯಿಸಿದ್ದಾರೆ.
ಮತ್ತೊಂದೆಡೆ, ಮೃತಳ ಮರಣೋತ್ತರ ಪರೀಕ್ಷೆಯ ವರದಿಗೆ ಪ್ರತಿಕ್ರಿಯಿಸಿದ ಖ್ಯಾತ ವೈದ್ಯರಾದ ಸುಬರ್ನೋ ಗೋಸ್ವಾಮಿ ಮತ್ತು ಕುನಾಲ್ ಶಂಕರ್ ಅವರು ಭಾನುವಾರ ಕೋಲ್ಕತ್ತಾ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅಲ್ಲದೆ, ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿಗೆ ಪೊಲೀಸರು ಈಗಾಗಲೇ ಸಮನ್ಸ್ ಜಾರಿ ಮಾಡಿದ್ದಾರೆ.
ಥಾಯ್ಲೆಂಡ್‌ನ ನೂತನ ಪ್ರಧಾನಿಯಾಗಿ ಪೇಟೊಂಗ್ಟಾರ್ನ್ ಶಿನಾವತ್ರಾ..ಶುಭ ಕೋರಿದ ಪ್ರಧಾನಿ ಮೋದಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 4 =
Remember me
