ನವದೆಹಲಿ:ಚುನಾವಣೆ ಹತ್ತಿರದಲ್ಲಿ ಇರುವಾಗ ಮುಂದಿನ ಅವಧಿಗೂ ತಾನೇ ಮುಖ್ಯಮಂತ್ರಿ ಆಗಬೇಕು ಎಂಬ ನಿಟ್ಟಿನಲ್ಲಿ ಕುರ್ಚಿಗೆ ಮತ್ತಷ್ಟು ಅಂಟಿಕೊಳ್ಳುವುದು ಸಹಜ. ಆದರೆ ಇಲ್ಲೊಬ್ಬರು ಮುಖ್ಯಮಂತ್ರಿ ಚುನಾವಣೆ ಹತ್ತಿರದಲ್ಲಿ ಇರುವಾಗಲೇ ರಾಜೀನಾಮೆ ನೀಡಿದ್ದಾರೆ.
ತ್ರಿಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಇಲ್ಲಿನ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್​ ದೇಬ್​ ಇಂದು ರಾಜೀನಾಮೆ ನೀಡಿದ್ದಾರೆ. ಇಂದು ರಾಜ್ಯಪಾಲ ಎಸ್​.ಎನ್​. ಆರ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ ಬಳಿಕ ಅವರು ಈ ವಿಷಯ ಘೋಷಣೆ ಮಾಡಿದ್ದಾರೆ. ಅಲ್ಲದೆ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪಕ್ಷದ ನಾಯಕರು ಕೆಲಸ ಮಾಡಲು ಸೂಚಿಸಿದ ಹಿನ್ನೆಲೆಯಲ್ಲಿ ಈ ರಾಜೀನಾಮೆ ನೀಡಿದ್ದಾಗಿಯೂ ಅವರು ತಿಳಿಸಿದ್ದಾರೆ.
ಎಲ್ಲಕ್ಕಿಂತಲೂ ಪಕ್ಷವೇ ಮಿಗಿಲು, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಅದು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವೇ ಇರಲಿ, ಮುಖ್ಯಮಂತ್ರಿ ಸ್ಥಾನವೇ ಇರಲಿ.. ಪಕ್ಷ ನನಗೆ ವಹಿಸಿದ್ದ ಎಲ್ಲ ಜವಾಬ್ದಾರಿಗೂ ನಾನು ನ್ಯಾಯ ಒದಗಿಸಿದ್ದೇನೆ ಎಂದ ಅವರು ತ್ರಿಪುರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಲ್ಲಿ ಸಶಕ್ತಗೊಳಿಸಬೇಕಾದರೆ ವಿವಿಧ ವಲಯದಲ್ಲಿ ನಾನು ಬೇರುಮಟ್ಟದಲ್ಲೇ ಕೆಲಸ ಮಾಡಬೇಕಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಬೇಕಿದ್ದರೆ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವುದಕ್ಕಿಂತ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿದೆ ಎಂದು ಅವರು ರಾಜೀನಾಮೆಗೆ ಕಾರಣವನ್ನು ತಿಳಿಸಿದ್ದಾರೆ.
ಮತ್ತೆ ಆಪರೇಷನ್ ಕಮಲ; ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ಖಚಿತ: ಸಚಿವ ಸೋಮಶೇಖರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 9 =
Remember me
