ರಾಜಸ್ಥಾನ:ಟ್ರಕ್ ಮತ್ತು ಎಂಯುವಿ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:6ನೇ ವಾರಕ್ಕೆ ಕಾಲಿಟ್ಟ ‘ಜವಾನ್’​; ಚಿತ್ರಮಂದಿರಗಳತ್ತ ಪ್ರೇಕಕರನ್ನು ಸೆಳೆಯುತ್ತಿದೆ ಶಾರೂಖ್​ ಸಿನಿಮಾ
ದೆಹಲಿ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರತನ್‌ಪುರ ಗಡಿಯ ಬಳಿ ಈ ಅಪಘಾತ ಸಂಭವಿಸಿದ್ದು, ಬ್ರೇಕ್​ ಫೇಲ್​ ಆದ ಕಾರಣ ಟ್ರಕ್​ ಜನರನ್ನು ಕರೆದೊಯ್ಯುತ್ತಿದ್ದ ಕ್ರೂಸರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 7 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಏಳು ಮಂದಿಯ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು, ತೀವ್ರವಾಗಿ ಗಾಯಗೊಂಡ ಮೂವರನ್ನು ಡುಂಗರ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರ ಪ್ರಕಾರ, ಟ್ರಕ್​ನ ಬ್ರೇಕ್ ವಿಫಲಗೊಂಡ ನಂತರ 13 ಜನರು ಕುಳಿತುಕೊಳ್ಳುವ ಸಾಮರ್ಥ್ಯವಿರುವ ಫೋರ್ಸ್ ಟ್ರಾಕ್ಸ್ ಕ್ರೂಸರ್ (MUV) ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಾಹನಗಳು ಪಲ್ಟಿಯಾಗಿದೆ.
ಇದನ್ನೂ ಓದಿ:BiggBoss Kannada S10: ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಮೊದಲ ಸ್ಪರ್ಧಿ ಸ್ನೇಕ್ ಶ್ಯಾಮ್!
ಡುಂಗರ್‌ಪುರದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ವಾಹನದಲ್ಲಿ 21 ಜನರು ಪ್ರಯಾಣಿಸುತ್ತಿದ್ದರು, ಈ ವೇಳೆ ಕೆಲವರು ವಾಹನದ ಛಾವಣಿಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ. ಅಪಘಾತದಲ್ಲಿ ವಾಹನದ ಚಾಲಕ ಕೂಡ ಸಾವನ್ನಪ್ಪಿದ್ದಾರೆ,(ಏಜೆನ್ಸೀಸ್).
6ನೇ ವಾರಕ್ಕೆ ಕಾಲಿಟ್ಟ ‘ಜವಾನ್’​; ಚಿತ್ರಮಂದಿರಗಳತ್ತ ಪ್ರೇಕಕರನ್ನು ಸೆಳೆಯುತ್ತಿದೆ ಶಾರೂಖ್​ ಸಿನಿಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
