ಪುಣೆ:ಪುಣೆ ಪೋರ್ಷೆ ಕಾರು ಅಪಘಾತ ನಡೆದ ಬೆನ್ನಲ್ಲೇ ಪುಣೆಯಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಒಂದು ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಹರಿದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮಾನನಷ್ಟ ಮೊಕದ್ದಮೆ: ಶಿಕ್ಷಣ ಸಚಿವೆ ಅತಿಶಿಗೆ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್​
ಬೈಕಿಗೆ ಡಿಕ್ಕಿ ಹೊಡೆದ ನಂತರ, ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿಹೋಗಲು ಯತ್ನಿಸಿದ್ದಾನೆ. ಆದರೆ ಓಡಿಹೋಗುತ್ತಿದ್ದ ಆತನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಪುಣೆಯ ಅಹಮದ್‌ನಗರ ರಸ್ತೆಯ ಚಂದನ್ ನಗರ ಪ್ರದೇಶದಲ್ಲಿ ರಾತ್ರಿ 10.30ರ ಸುಮಾರಿಗೆ ಬೈಕ್‌ನಲ್ಲಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದಿದ್ದು, ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಾವನ್ನಪ್ಪಿದ್ದಾರೆ. ಪುಣೆ-ಅಹ್ಮದ್‌ನಗರ ರಸ್ತೆಯ ಚಂದನ್ ನಗರ ಪ್ರದೇಶದಲ್ಲಿ ಸೋಮವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, 20 ವರ್ಷದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿಗಳು ಪುಣೆ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅವರಲ್ಲಿ ಇಬ್ಬರು ತಮ್ಮ ಹುಟ್ಟೂರಾದ ಮಹಾರಾಷ್ಟ್ರದ ಲಾತೂರ್‌ಗೆ ಹೋಗಬೇಕಿತ್ತು. ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಟ್ರಕ್ ಅವರ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವಿಮಲತಾಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದ್ ಖೋಬ್ರೆ ತಿಳಿಸಿದ್ದಾರೆ.
“ಅಪಘಾತದ ನಂತರ, ಟ್ರಕ್ ಚಾಲಕ ನಿಲ್ಲಿಸದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು, ಆದರೆ ಸುಮಾರು 300 ಮೀಟರ್ ದೂರದಲ್ಲಿ ಪೊಲೀಸರು ಮತ್ತು ಸ್ಥಳೀಯರು ಹಿಡಿದಿದ್ದಾರೆ ಎಂದು ಇನ್ಸ್‌ಪೆಕ್ಟರ್ ಆನಂದ್ ಖೋಬ್ರೆ ಹೇಳಿದರು.
ಟ್ರಕ್ ಚಾಲಕನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ) ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 19 ರಂದು, ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ 17 ವರ್ಷದ ಹುಡುಗ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಮೋಟಾರ್ ಬೈಕ್ ಅನ್ನು ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಮೃತಪಟ್ಟಿದ್ದರು.
ಲೋಕಸಭೆ ಚುನಾವಣೆ ಮತ ಎಣಿಕೆ: ಜೂ. 4ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + two =
Remember me
