ನವದೆಹಲಿ:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರ ಎರಡನೇ ದಿನದ ಕಾರ್ಯಕ್ರಮ ಪ್ರಾರಂಭವಾಗಿದೆ. ರಾಷ್ಟ್ರಪ್ರತಿ ಭವನದಲ್ಲಿ ಟ್ರಂಪ್​ ಅವರ ಗೌರವಾರ್ಥ ಸಮಾರಂಭ ಜರುಗಿತು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ ಹಾಗೂ ಕೇಂದ್ರ ಸಚಿವರು ರಾಷ್ಟ್ರಪತಿ ಭವನಕ್ಕೆ ಆಗಮಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮತ್ತು ಮೆಲಾನಿಯಾ ಟ್ರಂಪ್ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಾಗತ ಕೋರಿದರು. ಡೊನಾಲ್ಡ್​ ಟ್ರಂಪ್​ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಅಲ್ಲಿರುವ ಕೇಂದ್ರ ಸಚಿವರು, ಹಿರಿಯ ಅಧಿಕಾರಿಗಳಿಗೆ ಶೇಕ್​ ಹ್ಯಾಂಡ್ ಮಾಡಿದ ಟ್ರಂಪ್​ ಚುಟುಕಾಗಿ ಮಾತುಕತೆ ನಡೆಸಿದರು.
ರಾಷ್ಟ್ರಪತಿ ಭವನದಲ್ಲಿ ಎರಡೂ ದೇಶಗಳ ರಾಷ್ಟ್ರಗೀತೆ ಹಾಡಲಾಯಿತು. ಮೂರೂ ಸೇನಾಪಡೆಗಳಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಗೌರವ ಸಲ್ಲಿಸಲಾಯಿತು. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​, ಮೆಲಾನಿಯಾ ಟ್ರಂಪ್​, ರಾಷ್ಟ್ರಪತಿ ರಾಮನಾಥ ಕೋವಿಂದ, ಅವರ ಪತ್ನಿ ಸವಿತಾ ಕೋವಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ಭವನದಲ್ಲಿ ಗ್ರೂಪ್​ ಫೋಟೋಕ್ಕೆ ಪೋಸ್​ ನೀಡಿದರು.
US President@realDonaldTrumpinspects Guard of Honour during the ceremonial reception at@rashtrapatibhvn🇮🇳🇺🇸#NamasteyTrump#TrumpInIndia#IndiaWelcomesTrumppic.twitter.com/pSPQnOVaWV— PIB India (@PIB_India)February 25, 2020
US President@realDonaldTrumpinspects Guard of Honour during the ceremonial reception at@rashtrapatibhvn🇮🇳🇺🇸#NamasteyTrump#TrumpInIndia#IndiaWelcomesTrumppic.twitter.com/pSPQnOVaWV

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
