ಮುಂಬೈ:ದೇಶದಲ್ಲಿ ಇತ್ತೀಚೆಗೆ ಅಪಘಾತ, ಹೃದಯಾಘಾತ, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ಈ ಮೂರು ಕಾರಣಗಳಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ದಿನವೂ ಭಾರಿ ಸಂಖ್ಯೆಯಲ್ಲಿ ಕಂಡುಬರುತ್ತಿದೆ. ಇದೀಗ ನಟಿಯೊಬ್ಬಳು ತನ್ನ ಶೂಟಿಂಗ್ ಸೆಟ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಾಲಿವ್ ಎಂಬಲ್ಲಿನ ಶೂಟಿಂಗ್​ ಸೆಟ್​​ನಲ್ಲಿ ಈ ಪ್ರಕರಣ ನಡೆದಿದೆ. ಕಿರುತೆರೆ ನಟಿ ತುನಿಷಾ ಶರ್ಮಾ (20) ಆತ್ಮಹತ್ಯೆ ಮಾಡಿಕೊಂಡಾಕೆ. ಈಕೆ ತಾನು ನಟಿಸುತ್ತಿದ್ದ ಕಿರುತೆರೆಯ ಶೂಟಿಂಗ್ ಸೆಟ್​​ನಲ್ಲೇ ನೇಣು ಹಾಕಿಕೊಂಡಿದ್ದಳು.
ಘಟನೆಯಿಂದ ಸೆಟ್​ನಲ್ಲಿದ್ದವರು ತೀವ್ರ ಆಘಾತಕ್ಕೆ ಒಳಗಾಗಿದ್ದು, ನಟಿಯ ಶವವನ್ನು ನೋಡಿ ಬೆಚ್ಚಿಬಿದ್ದಿದ್ದರು. ಇದೀಗ ಆಕೆಯ ಬಾಯ್​ಫ್ರೆಂಡ್​ ಹೇಳಲಾಗುತ್ತಿರುವ ಶೀಜನ್​ ಖಾನ್​ (20) ಎನ್ನುವಾತನನ್ನು ಅರೆಸ್ಟ್​ ಮಾಡಲಾಗಿದೆ. ಈತ ತುನಿಷಾ ಜೊತೆಗೆ ‘ಅಲಿಬಾಬಾ ದಾಸ್ತಾನ್​ ಎ ಕಾಬುಲ್​’ ಎನ್ನುವ ಧಾರಾವಾಹಿಯಲ್ಲಿ ಜೊತೆಗೆ ನಟಿಸಿದ್ದರು ಎನ್ನಲಾಗಿದೆ.
‘ನಟಿಯ ತಾಯಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಜನ್​ ಖಾನ್ ವಿರುದ್ಧ ದೂರು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದೇವೆ’ ಎಂದು ಎಸಿಪಿ ಚಂದ್ರಕಾಂತ್​​ ಜಾಧವ್​ ಮಾಹಿತಿ ನೀಡಿದ್ದಾರೆ. ಅದಲ್ಲದೇ ಈ ಪ್ರಕರಣದಲ್ಲಿ ತುನಿಷಾ ಯಾವುದೇ ರೀತಿಯ ಡೆತ್​ ನೋಟ್​​ ಬರೆದಿಲ್ಲ. ಹೀಗಾಗಿ ಕೊಲೆ ಆ್ಯಂಗಲ್​ನಲ್ಲೇ ತನಿಖೆಯನ್ನು ಮಾಡಲಾಗುವುದು ಎಂದು ಎಸಿಪಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
