ಇಂಫಾಲ್:ಯಾರೇ ಎಷ್ಟೇ ಪ್ರಯತ್ನಿಸಿದರೂ ಮಣಿಪುರ ರಾಜ್ಯವನ್ನು ಒಡೆಯಲು ನಾವು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಹೇಳಿದರು.
ಇದನ್ನೂ ಓದಿ:ದೆಹಲಿ ಮದ್ಯನೀತಿ ಹಗರಣದಲ್ಲಿ ಮತ್ತೊಂಬರನ್ನು ಬಂಧಿಸಿದ ಇಡಿ!
2024 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂಫಾಲ್​ನಲ್ಲಿ ಸಾರ್ವಜನಿಕ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದ ಷಾ, ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸ್ಪರ್ಧೆ ಖಂಡಿತಾ ಅಲ್ಲ. ಮಣಿಪುರವನ್ನು ಒಡೆಯುವ ವಿಭಜಕ ಶಕ್ತಿಗಳು ಮತ್ತು ಮಣಿಪುರ ರಾಜ್ಯವನ್ನು ರಕ್ಷಿಸುವ ಶಕ್ತಿಗಳ ನಡುವಿನ ಯುದ್ಧ ಎಂದು ಅಮಿತ್ ಷಾ ಹೇಳಿದ್ದಾರೆ.
ಕಳೆದ 1 ವರ್ಷದಿಂದ ನಾಗರಿಕ ಹಿಂಸಾಚಾರಗಳಿಂದ ನಲುಗುತ್ತಿರುವ ಮಣಿಪುರಕ್ಕೆ ಈ ವರ್ಷ ಗೃಹ ಸಚಿವ ಅಮಿತ್ ಷಾ ನೀಡಿದ ಮೊದಲ ಭೇಟಿ. ‘ಯಾರು ಎಷ್ಟೇ ಪ್ರಯತ್ನಿಸಿದರೂ ಮಣಿಪುರವನ್ನು ಒಡೆಯಲು ನಾವು ಬಿಡುವುದಿಲ್ಲ. ಇದು ಬಹಳ ಮುಖ್ಯ ವಿಷಯ ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿದರು.ಸದ್ಯದಲ್ಲೇ ಲೋಕಸಭೆ ಚುನಾವಣೆ ಆರಂಭವಾಗಲಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಜನರು ಭಾರತದ ಪ್ರಧಾನಿಯನ್ನಾಗಿ ಮಾಡಬೇಕು ಕೋರಿದರು.
ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಲ್ಲ. ಬದಲಿಗೆ, ಇದು ಮಣಿಪುರವನ್ನು ವಿಭಜಿಸಲು ಬಯಸುವ ಜನರು ಮತ್ತು ಮಣಿಪುರವನ್ನು ರಕ್ಷಿಸಲು ಬಯಸುತ್ತಿರುವ ಬಿಜೆಪಿ ನಡುವೆ ನಡೆಯುವ ಕಾಳಗ. ಕಳೆದ 10 ವರ್ಷಗಳಲ್ಲಿ, ಮೋದಿ ಜಿ ಭಾರತವನ್ನು ಸಮೃದ್ಧಗೊಳಿಸಿದ್ದು ಮಾತ್ರವಲ್ಲದೆ ಭಾರತದ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕಳೆದ 75 ವರ್ಷ ಕಾಲ ಉಗ್ರ ಮತ್ತು ನಕ್ಸಲ್ ಶಕ್ತಿಗಳಿಂದ ನಲುಗಿದ್ದ ಈಶಾನ್ಯ ಪ್ರದೇಶದಲ್ಲಿ ನರೇಂದ್ರ ಮೋದಿ ಅವರು ಶಾಂತಿ ಮತ್ತು ಸಹಭಾಳ್ವೆಯ ವಾತಾವರಣ ತಂದಿದ್ದಾರೆ ಎಂದು ಕೇಂದ್ರ ಗೃಹ ಅಮಿತ್ ಷಾ ಅವರು ಹೇಳಿದರು.
ನಟ ಶಿವರಾಜ್​ಕುಮಾರ್​ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಆಸ್ತಿ ಮೌಲ್ಯ, ಸಾಲದ ಬಗ್ಗೆ ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − eight =
Remember me
