ಶ್ರೀನಗರ:ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಜೌರಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ರಾಜಸ್ಥಾನದಲ್ಲಿ ಕಾಂಗ್ರೆಸ್​ ಆಡಳಿತ ನಡೆಸಿದ್ದಕ್ಕಿಂತ ಕಿತ್ತಾಡಿಕೊಂಡಿದ್ದೆ ಜಾಸ್ತಿ: ಪ್ರಧಾನಿ ನರೇಂದ್ರ ಮೋದಿ
ಉಗ್ರರು ರಜೌರಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು  ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸುವ ವೇಳೆ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಇದರ ಪ್ರತೀಕಾರವಾಗಿ ಗುಂಡಿನ ದಾಳಿ ನಡೆದಿದೆ.
ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
