ಭರತ್​ಪುರ (ರಾಜಸ್ಥಾನ):ಗುಟ್ಕಾ ತಿಂದು ರಸ್ತೆಯಲ್ಲಿ ಉಗುಳಿದ ಆರೋಪದ ಮೇರೆಗೆ ರಾಜಸ್ಥಾನ ಪೊಲೀಸರು ಇಬ್ಬರನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.
ರಾಜಸ್ಥಾನದ ಉಚ್ಚೈನ್​ ನಿವಾಸಿಗಳಾದ ಗುಣೇಶ್​ ಮತ್ತು ರಾಜು ಬಂಧಿತರು. ರಾಜಸ್ಥಾನ ಸಾಂಕ್ರಾಮಿಕ ರೋಗ ತಡೆ ಕಾಯ್ದೆ, 1957ರ ಪ್ರಕಾರ ಇವರನ್ನು ಬಂಧಿಸಲಾಗಿದೆ.
ಕೋವಿಡ್​ 19 ಹರಡುವಿಕೆ ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಜಾರಿಗೆ ಬಂದ ನಂತರದಲ್ಲಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇಬ್ಬರನ್ನು ಬಂಧಿಸಿರುವುದು ರಾಷ್ಟ್ರದಲ್ಲೇ ಮೊದಲು ಎನ್ನಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಭರತ್​ಪುರ ಎಎಸ್​ಪಿ ಸುರೇಶ್​ ಖಿಂಚಿ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಈ ನಿಯಮ ಇತ್ತೀಚೆಗಷ್ಟೇ ಜಾರಿಗೆ ಬಂದಿದೆ. ಇದರನ್ವಯ ಲಾಕ್​ಡೌನ್​ ಉಲ್ಲಂಘಿಸಿ, ಗುಟ್ಕಾ ಜಗಿದು ಸಾರ್ವಜನಿಕ ಸ್ಥಳದಲ್ಲಿ ಉಗುಳಿದ್ದಕ್ಕಾಗಿ ಇವರಿಬ್ಬರನ್ನೂ ಬಂಧಿಸಲಾಗಿತ್ತು. ಸ್ವಲ್ಪಕಾಲ ಜೈಲಿನಲ್ಲಿರಿಸಿ, ನಂತರ ಬಿಟ್ಟು ಕಳುಹಿಸಲಾಯಿತು ಎಂದು ಹೇಳಿದ್ದಾರೆ.
ಬೇಸಿಗೆಗೂ ತಂಪು… ರೋಗನಿರೋಧಕ ಶಕ್ತಿಯೂ ಸೊಂಪು ಈ ಕೂಲ್​, ಕೂಲ್​ ಜ್ಯೂಸ್​; ಹೇಗೆ ಮಾಡುವುದು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − four =
Remember me
