ಲಖನೌ:ಅಂಗಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ದುಷ್ಕರ್ಮಿಗಳ ಗುಂಪೊಂದು ಅಪ್ರಾಪ್ತ ವಯಸ್ಕ ಬಾಲಕರಿಬ್ಬರಿಗೆ ಬಲವಂತವಾಗಿ ಮೂತ್ರ ಕುಡಿಸಿ ಖಾಸಗಿ ಅಂಗಗಳಿಗೆ ಹಸಿಮೆಣಸಿನಕಾಯಿಯಿಂದ ಉಜ್ಜಿ, ಇಂಜೆಕ್ಷನ್​ ನೀಡಿ ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಬಾಲಕರಿಬ್ಬರಿಗೆ ಬಲವಂತೆವಾಗಿ ಮೆಣಸಿನಕಾಯಿಯನ್ನು ತಿನ್ನಿಸಿ ಆ ನಂತರ ಮೂತ್ರ ಕುಡಿಸುತ್ತಿರುವುದು ಕಂಡು ಬರುತ್ತದೆ. ಸಂತ್ರಸ್ತ ಬಾಲಕರಿಬ್ಬರು 10-15 ವರ್ಷದವರು ಎಂದು ಹೇಳಲಾಗಿದೆ.
ಇದನ್ನೂ ಓದಿ:ನಟ, ನಿರ್ದೇಶಕ ಟಿ.ಎಸ್​. ನಾಗಾಭರಣಗೆ ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್​
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಬಾಲಕರಿಬ್ಬರನ್ನೂ ಕಟ್ಟಿಹಾಕಿರುವ ದುಷ್ಕರ್ಮಿಗಳು ಮೊದಲಿಗೆ ಅವರ ಗುದನಾಳಕ್ಕೆ ಹಸಿಮೆಣಸಿನಕಾಯಿಯಿಂದ ಉಜ್ಜುತ್ತಾನೆ. ಉರಿ ತಾಳಲಾರದೆ ಬಾಲಕರಿಬ್ಬರು ಕೂಗಿಕೊಳ್ಳುತ್ತಿದ್ದರು ಸುಮ್ಮನಾಗದ ಆರೋಪಿಗಳು ಅವರಿಗೆ ಇಂಜೆಕ್ಷನ್​ ನೀಡಿದ ಬಳಿಕ ಅವರಿಬ್ಬರಿಗೆ ಮೂತ್ರ ಕುಡಿಸುತ್ತಿರುವುದು ಕಂಡು ವೈರಲ್​ ಆಗಿರುವ ವಿಡಿಯೋದಲ್ಲಿ ಕಂಡು ಬರುತ್ತದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಿದ್ಧಾರ್ಥ್​ ಪ್ರಕರಣ ಸಂಬಂಧ ಆರು ಮಂದಿಯನ್ನೂ ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಶೀಘ್ರವೇ ಚಾರ್ಜ್​ಶೀಟ್​ ಸಿದ್ದಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಿದ್ಧಾರ್ಥ್ ತಿಳಿಸಿದ್ಧಾರೆ.
#WATCH| After a viral video purportedly showing two minors in UP's Siddharthnagar surfaces, ASP Siddhartha says, "A viral video on social media has come to notice in Thana Pathra Bazaar regarding objectionable acts with two minors. After taking note of the viral video, cases…pic.twitter.com/8yUGfkojal
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
