ರಾಜಸ್ಥಾನ:ರಾಜಸ್ಥಾನದ ಕೋಟಾದಲ್ಲಿ ಭೋಪಾಲ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಘಟನೆ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:Onti Bunty Love Story Review: ಪ್ರೀತಿ ಹುಡುಕಾಟದಲ್ಲಿ ಗೊಂದಲಗಳೇ ಹೆಚ್ಚು
ರೈಲ್ವೇ ಅಧಿಕಾರಿಗಳ ಪ್ರಕಾರ, ರೈಲು ಸಂಖ್ಯೆ 14813, ಜೋಧ್‌ಪುರ-ಭೋಪಾಲ್ ಎಕ್ಸ್‌ಪ್ರೆಸ್‌ನ ಎರಡು ಕೋಚ್‌ಗಳು ಕೋಟಾ ಜಂಕ್ಷನ್‌ನ ಬಳಿ ಹಳಿತಪ್ಪಿವೆ. ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಹಾರ ಕಾರ್ಯ ಆರಂಭಿಸಿದ್ದಾರೆ. ಕೋಟಾ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (DRM) ಪ್ರಯಾಣಿಕರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.
ಘಟನೆಯ ಕುರಿತು ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, “ಕೋಟಾ ಜಂಕ್ಷನ್ ಬಳಿ ಭೋಪಾಲ್‌ನತ್ತ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನ 2 ಬೋಗಿಗಳು ಹಳಿತಪ್ಪಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ. ಹಿಂದಿನ ಡಿಸೆಂಬರ್ 2023 ರಲ್ಲಿ ಇದೇ ರೀತಿ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಖಾಲಿ ರೈಲು ಹಳಿತಪ್ಪಿತ್ತು.
ಇದನ್ನೂ ಓದಿ:ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಜೂನ್ 29ಕ್ಕೆ ಫೈನಲ್: ಈ ಬಾರಿ ಟೂರ್ನಿಯ ಸ್ವರೂಪ ಹೇಗಿದೆ ಗೊತ್ತಾ!
ವರದಿಯ ಪ್ರಕಾರ, ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ,(ಏಜೆನ್ಸೀಸ್).
ಟಿ-20 ವಿಶ್ವಕಪ್ 2024: ಕ್ಯಾಪ್ಟನ್ ಯಾರು? ನೆಟ್ಟಿಗರಲ್ಲಿ ಶುರುವಾಯ್ತು ಗೊಂದಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − two =
Remember me
