ಜೈಪುರ:ಸರ್ಕಾರಿ ಕಚೇರಿ ಕಟ್ಟಡವೊಂದರ ಬೇಸ್​ಮೆಂಟ್​ನಲ್ಲಿ ಬರೋಬ್ಬರಿ 2.1 ಕೋಟಿ ರೂಪಾಯಿಗೂ ಅಧಿಕ ನಗದು ಮತ್ತು 1 ಕೆಜಿ ಚಿನ್ನದ ಬಿಸ್ಕೆಟ್​ ಪತ್ತೆಯಾಗಿರುವುದು ಅಧಿಕಾರಿಗಳನ್ನು ಹುಬ್ಬೇರಿಸುವಂತೆ ಮಾಡಿದೆ.
ಈ ಘಟನೆ ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ನಡೆದಿದೆ. ಯೋಜನಾ ಭವನದ ಬೇಸ್​ಮೆಂಟ್​ನ ಕಪಾಟಿನಲ್ಲಿ ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ.​ ಇದೇ ಕಟ್ಟಡದಲ್ಲಿ ಆದಾಯ ತೆರಿಗೆ ಇಲಾಖೆ ಸಹ ಕಾರ್ಯನಿರ್ವಹಿಸುತ್ತಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಾಜಸ್ಥಾನ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಯಾರು ಈ ಗಂಗಾಧರ ಅಜ್ಜ? ಅವರ ಹೆಸರಿನಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದೇಕೆ?
ಕಟ್ಟಡದಲ್ಲಿ ಹಣ ಮತ್ತು ಚಿನ್ನ ಪತ್ತೆಯಾಗಿದೆ ಎಂದು ಐಟಿ ಇಲಾಖೆಯ ಹೆಚ್ಚುವರಿ ನಿರ್ದೇಶಕರೇ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಜೈಪುರದ ಪೊಲೀಸ್​ ಆಯುಕ್ತ ಆನಂದ್​ ಶ್ರೀವಾಸ್ತವ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸದ್ಯ ಈ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲಿಸುತ್ತಿದ್ದಾರೆ.(ಏಜೆನ್ಸೀಸ್​)
ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
