ತಿರುವನಂತಪುರಂ:ಕಮ್ಯುನಿಷ್ಟರ ಪಕ್ಷದ ಆಡಳಿತವಿರುವ ಕೇರಳದಲ್ಲಿ ಇದೀಗ ಬಿಜೆಪಿ ಅಲೆ ಆರಂಭವಾಗಿದೆ. ರಾಜ್ಯದಲ್ಲಿ ಪ್ರತಿ ವಾರ ಒಂದಿಷ್ಟು ಮಂದಿ ಎಡ ಪಂಥದಿಂದ ಬಲ ಪಂಥಕ್ಕೆ ವಾಲಿ, ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಕೇರಳ ಹೈ ಕೋರ್ಟ್​ನ ಇಬ್ಬರು ಮಾಜಿ ನ್ಯಾಯಮೂರ್ತಿಗಳು ಸೇರಿ ಒಟ್ಟು 18 ಮಂದಿ ಬಿಜೆಪಿ ಸೇರಿದ್ದಾರೆ.
ಎರ್ನಾಕುಲಂನ ತ್ರಿಪುಣಿತುರಾದಲ್ಲಿ ಭಾನುವಾರ ಬಿಜೆಪಿ ‘ವಿಜಯ ಯಾತ್ರೆ’ ನಡೆದಿದೆ. ಈ ಸಮಯದಲ್ಲಿ ಒಟ್ಟು 18 ಮಂದಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅದರಲ್ಲಿ ಕೇರಳ ಹೈ ಕೋರ್ಟ್​ನ ಮಾಜಿ ನ್ಯಾಯಮೂರ್ತಿಗಳಾದ ಪಿ.ಎನ್.ರವೀಂದ್ರನ್ ಮತ್ತು ವಿ.ಸೀತಂಬರೇಶ್ ಕೂಡ ಸೇರಿದ್ದಾರೆ. ಸೀತಾಂಬರೇಶ್​ ಅವರು ದೆಹಲಿಯಲ್ಲಿದ್ದು, ಅಲ್ಲಿಂದಲೇ ವಿಡಿಯೋ ಕಾಲ್​ ಮುಖಾಂತರ ಬಿಜೆಪಿ ಸೇರಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಕ್ಟೋರಿಯಾ ಕಾಲೇಜಿನ ಪಾಲಕ್ಕಾಡ್ನಲ್ಲಿ ಓದುತ್ತಿದ್ದಾಗ ಅಖಿಲ್ ಭಾರತೀಯ ವಿದ್ಯಾ ಪರಿಷತ್ (ಎಬಿವಿಪಿ) ಕಾರ್ಯಕರ್ತರಾಗಿದ್ದ ಅನುಭವವನ್ನು ಹಂಚಿಕೊಂಡರು. ಈ ಇಬ್ಬರು ಮಾಜಿ ನ್ಯಾಯಮೂರ್ತಿಗಳು ಈ ಹಿಂದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರಿಗೆ ಲವ್​ ಜಿಹಾದ್​ ಕಾನೂನನ್ನು ಬೆಂಬಲಿಸಿ ಪತ್ರ ಬರೆದಿದ್ದರು.
ಈ ಇಬ್ಬರು ಗಣ್ಯರ ಜತೆಗೆ ಮಾಜಿ ಡಿಜಿಪಿ ವೇಣುಗೋಪಾಲ್ ನಾಯರ್, ಅಡ್ಮಿರಲ್ ಬಿಆರ್ ಮೆನನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಮಾಜಿ ಜನರಲ್ ಮ್ಯಾನೇಜರ್ ಸೋಮಚುದನ್ ಅವರೂ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಈ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಕರೊನಾ ಲಸಿಕೆ ಉಚಿತ!

ಜಾಲತಾಣದಲ್ಲಿ ಕಿಚ್ಚು ಹಚ್ಚಿದ ನಟಿಯ ಬೆತ್ತಲೆ ಫೋಟೋ: ಈಕೆ ಐಪಿಎಲ್​ ಆ್ಯಂಕರ್​ ಸಹ ಹೌದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + seventeen =
Remember me
