ಶ್ರೀನಗರ: ಉಗ್ರರ ದಾಳಿಯಿಂದ ಇಬ್ಬರು ಬಿಎಸ್‌ಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ಇಬ್ಬರು ಉಗ್ರಗಾಮಿಗಳನ್ನು ಭಾರತೀಯ ಸೇನೆ ಬಲಿ ಪಡೆದು ಸೇಡು ತೀರಿಸಿಕೊಂಡಿದೆ.
ಜಮ್ಮು- ಕಾಶ್ಮೀರದ ಶ್ರೀನಗರ ಜಿಲ್ಲೆಯ ನವಕಡಾಲ್ ಪ್ರದೇಶದಲ್ಲಿ ಭಾರತೀಯ ರಕ್ಷಣಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಹಿಜ್ಬುಲ್ ಮುಜಾಹಿದ್ದೀನ್‌ನ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರಿಗೆ ಗಾಯವಾಗಿದೆ. ನವಕಡಾಲ್‌ನಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯ ನಡೆಸಲಾಗಿತ್ತು. ರಾತ್ರಿ 2 ಗಂಟೆಯ ಹೊತ್ತಿಗೆ ಗುಂಡಿನ ಕಾಳಗ ಆರಂಭವಾಗಿದೆ. ಸತತ ಐದು ಗಂಟೆಗಳ ಕಾಲ ಕಾರ್ಯಾಚರಣೆ ನಡೆದಿದೆ.
ಇದನ್ನೂ ಓದಿಭಾರತ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸಿದ ಅಂಫಾನ್ ಚಂಡಮಾರುತ: ಭಾರಿ ಮಳೆ, ಗಾಳಿ
ಉಗ್ರರ ಬಳಿಯಿದ್ದ ಎರಡು ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದಕ್ಕೆ ಮುನ್ನ ಬುಧವಾರ ಶ್ರೀನಗರದ ಹೊರವಲಯದಲ್ಲಿ ಉಗ್ರರು ಗಡಿ ಭದ್ರತಾ ಪಡೆಯ ಯೋಧರ ಮೇಲೆ ದಾಳಿ ನಡೆಸಿದ್ದು ಇಬ್ಬರು ಯೋಧರು ಹುತಾತ್ಮರಾಗಿದ್ದರು. ಯೋಧರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಉಗ್ರರು ಪರಾರಿಯಾಗಿದ್ದರು.
ಇದನ್ನೂ ಓದಿರಿಜೂಮ್ ವಿಡಿಯೋ ಕಾಲ್​ನಲ್ಲೇ ಅಪರಾಧಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!
ಮೋದಿ ಬಗ್ಗೆ ಅವಹೇಳನ: ಕಾಂಗ್ರೆಸ್ ಟ್ವಿಟರ್ ಖಾತೆ ವಿರುದ್ಧ ಎಫ್‌ಐಆರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
