ಶ್ರೀನಗರ:ಶಸ್ತ್ರ ಸಜ್ಜಿತ ಇಬ್ಬರು ಉಗ್ರರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ.
ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರಲ್ಲಿ ಓರ್ವ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಉಗ್ರನಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಜೌರಿಯ ನಿವಾಸಿಯಾಗಿದ್ದ ಎಲ್​ಇಟಿ ಕಮಾಂಡರ್​ ತಲಿಬ್​ ಹುಸೇನ್ ಮತ್ತು ಫೈಜಲ್​ ಅಹ್ಮದ್​ ಬಂಧಿತ ಉಗ್ರನಾಗಿದ್ದು, ಬಂಧಿತರಿಂದ ಎಕೆ ಅಸಾಲ್ಟ್ ರೈಫಲ್ಸ್, 7 ಗ್ರೆನೇಡ್​​ಗಳು, ಒಂದು ಪಿಸ್ತೂಲ್​ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗ್ರಾಮಸ್ಥರ ಈ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಜಿಪಿ ದಿಲ್ಬಗ್​ ಸಿಂಗ್​​​ ಗ್ರಾಮಸ್ಥರಿಗೆ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.(ಏಜೆನ್ಸೀಸ್​)
ಧೂಮ್​​ ಚಿತ್ರದ ಪ್ರೇರಣೆಯಿಂದ ಶಾಲೆಗೆ ಕನ್ನ: ಕಳ್ಳತನ ಬಳಿಕ ಬೋರ್ಡ್​​ ಮೇಲೆ ಬರೆದಿದ್ದು ನೋಡಿ ಶಿಕ್ಷಕರೇ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nine =
Remember me
