ಮಥುರಾ:ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದ ಬಾಬಾ ಮಂದಿರದಲ್ಲಿ ಇಬ್ಬರು ಗುರುವಾರ ನಮಾಜ್ ಮಾಡಿದ ವಿಚಾರ ಬಹಿರಂಗವಾಗಿದೆ. ದೇವಸ್ಥಾನದ ಒಳಗೆ ನಮಾಜ್ ಮಾಡಿದವರನ್ನು ಫೈಜಲ್​ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಈ ಇಬ್ಬರೂ ಗುರುತು ಮರೆಮಾಚಿ ದೇವಸ್ಥಾನದ ಒಳಗೆ ಪ್ರವೇಶಿಸಿ ಅಲ್ಲಿ ನಮಾಜ್ ಮಾಡಿದ ದೃಶ್ಯಗಳು ಈಗ ವೈರಲ್ ಆಗಿವೆ. ದೇವಸ್ಥಾನದ ಮುಖ್ಯ ಅರ್ಚಕರ ಗಮನಕ್ಕೆ ಈ ವಿಷಯ ಬರುತ್ತಲೇ ಎಚ್ಚರಿಸುವ ಕೆಲಸ ಮಾಡಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾಗಿಇಂಡಿಯಾ ಟಿವಿವರದಿ ಮಾಡಿದೆ.
ಇದನ್ನೂ ಓದಿ:ಬಾಬರಿ ಕಟ್ಟಡ ಧ್ವಂಸ ಪ್ರಕರಣದ ತೀರ್ಪು ನೀಡಿದ ಮಾಜಿ ನ್ಯಾಯಾಧೀಶರಿಗೆ ಭದ್ರತೆ ವಿಸ್ತರಣೆ ಇಲ್ಲ: ಸುಪ್ರೀಂ ಕೋರ್ಟ್​
ಪ್ರಾಥಮಿಕ ಮಾಹಿತಿ ಕಲೆ ಹಾಕಿದ ಪೊಲೀಸರು, ಖಾನ್, ಚಾಂದ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅವರಿಗೆ ದೇವಸ್ಥಾನದೊಳಗೆ ಪ್ರವೇಶಿಸುವುದಕ್ಕೆ ನೆರವಾದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ, ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಕ್ಕೆ ಭದ್ರತೆ ಒದಗಿಸಿದ್ದು, ಅಹಿತಕರ ಘಟನೆಗಳಾದಂತೆ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ತೆಗೆದುಕೊಂಡಿದ್ದಾರೆ. (ಏಜೆನ್ಸೀಸ್)
ನ್ಯೂಜಿಲೆಂಡ್​ನ ಮೊಟ್ಟಮೊದಲ ಭಾರತೀಯ ಮೂಲದ ಸಚಿವೆ ಪ್ರಿಯಾಂಕಾ ರಾಧಾಕೃಷ್ಣನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
