ಶ್ರೀನಗರ:ಜಮ್ಮು-ಕಾಶ್ಮೀರದ ಬದ್ಗಾಂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿ ಪಡೆದ ಸುರಕ್ಷಾ ಪಡೆ ಯೋಧರು ಬದ್ಗಾಂ ಜಿಲ್ಲೆಯ ಛದೂರಾ ಪ್ರದೇಶದ ಮೌಚ್ವಾಹ್​ ಎಂಬಲ್ಲಿ ಶೋಧ ಕಾರ್ಯ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ಮಂಗಳವಾರ ರಾತ್ರಿ 7 ಗಂಟೆಗೆ ಆರಂಭಿಸಿದ್ದರು. 9 ಗಂಟೆ ಸುಮಾರಿಗೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರು.
ಇದನ್ನೂ ಓದಿ:ವಿಜಯದಶಮಿಗೆ ಶರಣ ತತ್ವದ ಸ್ಪರ್ಶ: ಶರಣ ಸಂಸ್ಕೃತಿ ಉತ್ಸವಕ್ಕೀಗ 30 ವರ್ಷ
ಯೋಧರು ಕೂಡ ಪ್ರತಿದಾಳಿ ನಡೆಸಿದ್ದು, ಸಂಘರ್ಷ ನಾಲ್ಕು ಗಂಟೆ ಕಾಲ ಮುಂದುವರಿದಿತ್ತು. ಕೊನೆಗೆ ಇಬ್ಬರು ಉಗ್ರರು ಹತರಾಗಿರುವುದು ಪತ್ತೆಯಾಗಿದೆ. ಅವರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬಿತ್ಯಾದಿ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಒಬ್ಬ ಉಗ್ರ ವಿದೇಶೀಯ ಎಂಬುದು ತಿಳಿದು ಬಂದಿದೆ. (ಏಜೆನ್ಸೀಸ್)
ಕಾಂಗ್ರೆಸ್ ಪ್ರಚಾರ ಸಭೆಗೆ ಬಿಜೆಪಿ ಕಾರ್ಯಕತರ ಅಡ್ಡಿ: ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
