ಮುಂಬೈ:ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರ ಬಳಿ ಭಾನುವಾರ ಬೆಳಗ್ಗೆ ಪತನಗೊಂಡಿದ್ದು, ವಿಮಾನದಲ್ಲಿದ್ದ ತರಬೇತಿ ಪೈಲಟ್ ಮತ್ತು ಬೋಧಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪ್ಯಾಲೆಸ್ತೇನಿಯನ್ನರನ್ನು ಸಿನಾಯ್ ದ್ವೀಪಕ್ಕೆ ಓಡಿಸುವುದನ್ನು ಒಪ್ಪಲಾಗದು: ಅರಬ್​ ನಾಯಕರು
ಬಾರಾಮತಿ ತಾಲೂಕಿನ ಗೋಜುಬಾವಿ ಗ್ರಾಮದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ವಿಮಾನ ಪತನಗೊಂಡಿದೆ.“ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಇದಾಗಿದ್ದು, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ” ಎಂದು ಬಾರಾಮತಿ ಪೊಲೀಸ್ ಠಾಣೆಯ ಹಿರಿಯ ಇನ್‌ಸ್ಪೆಕ್ಟರ್ ಪ್ರಭಾಕರ್ ಮೋರೆ ತಿಳಿಸಿದ್ದಾರೆ.
“ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದರು.
ನಾಲ್ಕು ದಿನಗಳಲ್ಲಿ ಖಾಸಗಿ ವಿಮಾನಯಾನ ಅಕಾಡೆಮಿಯ ವಿಮಾನವನ್ನು ಒಳಗೊಂಡ ಎರಡನೇ ಘಟನೆ ಇದಾಗಿದೆ. ಗುರುವಾರ ಸಂಜೆ, ಅಕಾಡೆಮಿಯ ತರಬೇತಿ ವಿಮಾನವು ಬಾರಾಮತಿ ತಾಲೂಕಿನ ಕಫ್ತಾಲ್ ಗ್ರಾಮದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೀ ಹಾಕಿ ಸ್ಟಾರ್ಟ್ ಮಾಡಿದ್ದೇ ತಡ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen + 18 =
Remember me
