ವಿಜಯವಾಡ:ಲಾರಿ ಹರಿದು ಕರ್ತವ್ಯನಿರತ ಪೊಲೀಸರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಮುಖ್ಯ ಪೊಲೀಸ್​ ಪೇದೆ ಸತ್ಯನಾರಾಯಣ ಮತ್ತು ಹೋಮ್​ ಗಾರ್ಡ್​ ಎನ್​. ಎಸ್​. ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಾಕಿನಾಡದ ತಿಮ್ಮಾಪುರಂ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ವಿಜಯವಾಡದಿಂದ ಬರುತ್ತಿದ್ದ ಲಸಿಕಾ ವಾಹನದ ಬೆಂಗಾವಲು ಸೇವೆಯಲ್ಲಿದ್ದರು.
ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಇಬ್ಬರ ಮೇಲೆ ಹರಿದಿದ್ದು, ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್​ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕಾಕಿನಾಡ ಡಿಎಸ್​ಪಿ ಭೀಮಾರಾವ್​ ಮತ್ತು ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.(ಏಜೆನ್ಸೀಸ್​)
ಆತ್ಮಹತ್ಯೆ ಸ್ಥಿತಿಯಲ್ಲಿ ನಟ ಉನ್ನಿ ರಾಜನ್​ ಪತ್ನಿಯ ಶವ ಪತ್ತೆ: ಬೆನ್ನ ಹಿಂದಿನ ಗುರುತು ಬಿಚ್ಚಿಟ್ಟ ಕರಾಳ ಕತೆ ಇದು

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ಅಕ್ಷಯ ತೃತೀಯದಂದೇ ರೈತರಿಗೆ ಸಿಹಿ

ಸೋನಿಯಾಗೆ ಹೆರಿಗೆ ಮಾಡಿಸಿದ್ದ ಸ್ತ್ರೀರೋಗ ತಜ್ಞೆ ಕೋವಿಡ್‌ನಿಂದ ಸಾವು- ಎರಡೂ ಲಸಿಕೆ ಪಡೆದಿದ್ದ ವೈದ್ಯೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − one =
Remember me
