ಹೈದರಾಬಾದ್‌:ಆಸ್ಪತ್ರೆಯಲ್ಲಿದ್ದ ಸಂಬಂಧಿಕನನ್ನು ನೋಡಿಕೊಳ್ಳಲು ಬಂದಿದ್ದ ಮಹಿಳೆ ಹಾಗೂ ಆಕೆಯ ತಂಗಿಯ ಮೇಲೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಾಗೂ ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್​​ನ ಗಾಂಧಿ ಆಸ್ಪತ್ರೆಯಲ್ಲಿ ನಡೆದಿದೆ.
ತನ್ನ ಸಹೋದರಿ ಮತ್ತು ಸಂಬಂಧಿಕನೊಂದಿಗೆ ಮಹಿಳೆ ಆಸ್ಪತ್ರೆಗೆ ಬಂದಿದ್ದು, ಆರೋಪಿ ಉಮಾ ಮಹೇಶ್ವರ್ ಎಂಬ ಲ್ಯಾಬ್ ಟೆಕ್ನಿಷಿಯನ್ ತನ್ನನ್ನು ಕೋಣೆಗೆ ಕರೆದೊಯ್ದು, ಮಾದಕ ದ್ರವ್ಯ ನೀಡಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ದೂರಿದ್ದಾರೆ. ಸುಮಾರು ನಾಲ್ಕು ದಿನಗಳ ಕಾಲ ಕೋಣೆಯಲ್ಲಿ ಬಂಧಿಸಿ, ಆರೋಪಿ ಸೇರಿದಂತೆ ಆತನ ಸ್ನೇಹಿತರು ಕೂಡ ಅತ್ಯಾಚಾರ ಎಸಗಿದ್ದಾರೆ. ಆರೋಪಿ ತನ್ನ ಅಕ್ಕನ ಮೇಲೂ ಅತ್ಯಾಚಾರ ಎಸಗಿದ್ದು, ಆಕೆ ಇನ್ನೂ ಪತ್ತೆಯಾಗಿಲ್ಲ ಎಂದು ಮಹಿಳೆ ಮಾಹಿತಿ ನೀಡಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಉಮಾ ಮಹೇಶ್ವರ್ ಮತ್ತು ಆತನ ಸ್ನೇಹಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಚಿಲ್ಕಲಗೂಡ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಿ. ನರೇಶ್ ಮಾಹಿತಿ ನೀಡಿದ್ದಾರೆ.
ಮೂರು ಬಾರಿ ಕೊಲ್ಲಲು ಪ್ರಯತ್ನಿಸಿದ್ದಾರೆ- ಕಚೇರಿಯಲ್ಲಿಯೇ ಕುಳಿತು ಅವರಿಗಾಗಿ ಕಾಯುತ್ತಿದ್ದೇನೆ; ಏಕೆಂದರೆ ನಾನು ಹೆಣ್ಣು…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − one =
Remember me
