ಶ್ರೀನಗರ:ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಇಂದು (ಆಗಸ್ಟ್​ 10) ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಅಹ್ಲಾನ್ ಗಡೋಲ್‌ನ ಕೋಕರ್ನಾಗ್ ಉಪವಿಭಾಗದ ಅರಣ್ಯದಲ್ಲಿ ಆ್ಯಂಟಿ ಟೆರರಿಸ್ಟ್​ ಆಪರೇಷನ್​ ನಡೆಸುವಾಗಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸೇನೆಯ ವಿಶೇಷ ಪಡೆಗಳು , ಪ್ಯಾರಾಟ್ರೂಪರ್‌ಗಳು ಈ ಕಾರ್ಯಾಚರಣೆಯ ಭಾಗವಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
OP GAGARMANDU,#AnantnagTwo civilians have also been reported injured due to indiscriminate, desperate and reckless firing by terrorists in the ongoing operation; they have been provided immediate medical aid and evacuated further.Operations are under progress.#Kashmir…
ಇದನ್ನೂ ಓದಿ:ಮರ್ಯಾದ ಹತ್ಯೆ ಅಪರಾಧವಲ್ಲ, ಪಾಲಕರು ತಮ್ಮ ಮಕ್ಕಳ ಮೇಲಿಟ್ಟಿರುವ ಪ್ರೀತಿಗೆ ಸಾಕ್ಷಿ; ಖ್ಯಾತ ನಟನ ಹೇಳಿಕೆ ವೈರಲ್​
ಈ ಕುರಿತು ಪ್ರತಿಕ್ರಿಯಿಸಿರುವ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಅರಣ್ಯದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಕಾರ್ಯಾಚರಣೆ ನಡೆಸುತ್ತಿದ್ದ ಸೇನೆ ಅವರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದು, ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿ, ನಾಗರೀಕರು ಸೇರಿದಂತೆ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾದೆ ಇಬ್ಬರು ಯೋಧರು ಹುತಾತ್ಮರಾದರು.
ಕಾರ್ಯಾಚರಣೆ ಮುಂದುವರೆದಿದ್ದು, ಗಡೋಲ್‌ನ ಕೋಕರ್ನಾಗ್ ಪ್ರದೇಶದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
