ನವದೆಹಲಿ:ದ್ವಿಚಕ್ರ ವಾಹನ ತಯಾರಕರು ತಮ್ಮ ವಾಹನ ಖರೀದಿದಾರರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್ ನೀಡುವ ಮೂಲಕ ರಸ್ತೆ ಅಪಘಾತಗಳಲ್ಲಿ ಸಂಭವಿಸಬಹುದಾದ ಸಾವಿನ ಸಂಖ್ಯೆ ಇಳಿಸಲು ಕೈ ಜೋಡಿಸಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ.
ಇದನ್ನೂ ಓದಿ:ಬಿಜೆಪಿಯ ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಯಿಂದ ಬಿಡುಗಡೆ!
ಹೆಲ್ಮೆಟ್ ಧರಿಸದ ಕಾರಣ 2022ರಲ್ಲಿ ದೇಶದಲ್ಲಿ 50,029 ಮಂದಿ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ರಿಯಾಯಿತಿ ದರದಲ್ಲಿ ಅಥವಾ ಕಡಿಮೆ ಕಡಿಮೆ ಬೆಲೆಗೆ ಹೆಲ್ಮೆಟ್ ನೀಡಿದರೆ ಬಹಳಷ್ಟು ಪ್ರಾಣಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ “ದ್ವಿಚಕ್ರ ವಾಹನ ತಯಾರಕರು ಯೋಚಿಸಬೇಕು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ಭಾರಿ ದಂಡದೊಂದಿಗೆ ಮೋಟಾರು ವಾಹನಗಳ (ತಿದ್ದುಪಡಿ) ಕಾಯಿದೆ 2019 ಜಾರಿಗೆ ಬಂದಿದೆ. ಆದರೆ ಇಂಥ ಕಾನೂನಗಳ ಪರಿಣಾಮಕಾರಿ ಜಾರಿಯೂ ದೊಡ್ಡ ಸವಾಲಾಗಿದೆ. ದೇಶದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಡ್ರೈವಿಂಗ್ ಸ್ಕೂಲ್ ಆರಂಭಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದೆ. ಜೊತೆಗೆ ಶಾಲಾ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಬೇಕಿದೆ, ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಕೇಂದ್ರ ಸಚಿವ ಗಡ್ಕರಿ ಅವರು ತಿಳಿಸಿದ್ದಾರೆ.
2022 ರಲ್ಲಿ 4,30 ಲಕ್ಷ ಸಾವುಗಳು ಉದ್ದೇಶವಲ್ಲದ ಹಾಗೂ 1.70 ಲಕ್ಷ ಸಾವುಗಳು ಉದ್ದೇಶಪೂರ್ವಕವಾಗಿ ಸಂಭವಿಸಿವೆ. ಈಗ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ.
ಆರೋಗ್ಯ ಇಲಾಖೆಯನ್ನು ಒಳಗೊಂಡ ರಚಿಸಾಲದ ಉದ್ದೇಶವಲ್ಲದ ಹಾನಿಯನ್ನು ನಿಯಂತ್ರಿಸುವ ರಾಷ್ಟ್ರೀಯ ತಂತ್ರ ಎಂಬ ಶೀರ್ಷಿಕೆಯ ಹೊಸ ವರದಿಯಲ್ಲಿ ಭಾರತದದಲ್ಲಿ ಸಂಭವಿಸುವ ರಸ್ತೆ ಅಪಘಾತದಲ್ಲಿನ ಸಾವುಗಳು ತಮ್ಮದಲ್ಲದ ಉದ್ದೇಶವಲ್ಲದ ಘಾಸಿಗಳೇ ಆಗಿವೆ. ಪ್ರಮುಖಾಗಿ ಅತಿ ವೇಗದ ಚಾಲನೆಯಿಂದ ಶೇ.43ರಷ್ಟು ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶ | ಪಕ್ಷಾಂತರ ಮಾಡುವ ಶಾಸಕರಿಗೆ ಪಿಂಚಣಿ ಇಲ್ಲ: ವಿಧಾನಸಭೆಯಲ್ಲಿ ಹೊಸ ಮಸೂದೆ ಅಂಗೀಕಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
