ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿಯ ಮಲ್ಬಾರ್ ಹಿಲ್​​ನಲ್ಲಿರುವ ಸರ್ಕಾರಿ ನಿವಾಸ ವರ್ಷಾದ ಬಳಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ನಾಲ್ವರು ಪೊಲೀಸರಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ.
ಉದ್ಧವ್​ ಠಾಕ್ರೆಯವರ ನಿವಾಸದ ಬಳಿ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳು, ಓರ್ವ ಅಸಿಸ್ಟಂಟ್​ ಪೊಲೀಸ್ ಇನ್ಸ್​ಪೆಕ್ಟರ್​ ಮತ್ತು ಓರ್ವ ಪೇದೆಯನ್ನು ನಿಯೋಜಿಸಲಾಗಿತ್ತು. ಈಗ ಇಬ್ಬರು ಮಹಿಳಾ ಪೊಲೀಸ್​ ಅಧಿಕಾರಿಗಳಿಗೆ ಕರೊನಾ ವೈರಸ್ ತಗುಲಿದ್ದು ದೃಢಪಟ್ಟಿದೆ. ಅವರೊಂದಿಗೆ ಕರ್ತವ್ಯದಲ್ಲಿದ್ದ ಉಳಿದ ಇಬ್ಬರನ್ನು ಸೇರಿಸಿ, ಒಟ್ಟು ಆರು ಮಂದಿ ಪೊಲೀಸರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.
ಉದ್ಧವ್​ ಠಾಕ್ರೆಯವರು ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿಯೇ ಇದ್ದು, ಕೆಲಸದ ನಿಮಿತ್ತ ಆಗಾಗ ಈ ಸರ್ಕಾರಿ ಮನೆಗೆ ಬರುತ್ತಿದ್ದರು.
ದಕ್ಷಿಣ ಮುಂಬೈನಲ್ಲಿರುವ ಈ ಮಲ್ಬಾರ್​ ಹಿಲ್​ ಏರಿಯಾದಲ್ಲಿ ಮುಖ್ಯಮಂತ್ರಿ ಸೇರಿ ಹಲವು ಸಚಿವರ ನಿವಾಸಗಳಿವೆ.ಆ ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಎಲ್ಲ ಪೊಲೀಸರ ರಕ್ತ ಮತ್ತು ಗಂಟಲಿನ ದ್ರವದ ಮಾದರಿಯನ್ನು ತೆಗೆದುಕೊಳ್ಳಲಾಗಿದ್ದು, ತಪಾಸಣೆಗೆ ಒಳಪಡಿಸಲಾಗುವುದು ಎಂದು ಹೇಳಲಾಗಿದೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − sixteen =
Remember me
