ದೆಹಲಿ:ಬೈಕ್​ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆ ಭಾರೀ ಜಟಾಪಟಿ ನಡೆದಿದ್ದು, ಬಂದೂಕು ತೋರಿಸಿ ವ್ಯಕ್ತಿಯೊಬ್ಬನಿಗೆ ಬೆದರಿಸಿದ ದೃಶ್ಯ ಇದೀಗ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಖಲಿಸ್ತಾನಿ ಭಯೋತ್ಪಾದಕನ ಹತ್ಯೆ; ಕೆನಡಾದ ರಾಜತಾಂತ್ರಿಕ ಅಧಿಕಾರಿ ಉಚ್ಚಾಟಿಸಿದ ಭಾರತ
ಘಟನೆಯ ವಿವರ:ಈಶಾನ್ಯ ದೆಹಲಿಯ ಭಜನ್‌ಪುರದಲ್ಲಿ ನಿಲ್ಲಿಸಿದ್ದ ಕಾರಿಗೆ ಬೈಕ್​ನಲ್ಲಿ ಬಂದ ಇಬ್ಬರು ಯುವಕರು ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಯುವಕರು ಮತ್ತು ಕಾರಿನ ಮಾಲಿಕನ ನಡುವೆ ಬಿರುಸಿನ ವಾಗ್ದಾಳಿ ನಡೆದಿದೆ. ಜಗಳದ ತೀವ್ರತೆ ಹೆಚ್ಚುತ್ತಿದ್ದಂತೆ ಚಾಲಕನಿಗೆ ಬಂದೂಕಿನಿಂದ ಬೆದರಿಸಿದ ಇಬ್ಬರು ಅಪರಿಚಿತ ಯುವಕರ ವಿರುದ್ಧ ಸದ್ಯ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಶುಕ್ರವಾರ ಮಧ್ಯರಾತ್ರಿ 1.15ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆ ಸೂಚಿಸಿದೆ.
ಇದನ್ನೂ ಓದಿ:ದಳಪತಿ ವಿಜಯ್ ನಟನೆಯ ‘ಲಿಯೋ’ ಚಿತ್ರದ ಕನ್ನಡ ಪೋಸ್ಟರ್ ರಿಲೀಸ್
भजनपुरा इलाके में बदमाशों ने घर के बाहर खड़ी कार को पहले जोरदार टक्कर मारी। आवाज सुनकर इंजीनियर युवक बाहर निकला तो वह बदमाशों से भिड़ गया। आईटी इंजीनियर युवक ने विरोध किया तो बदमाश तमंचा लेकर गोली मारने का करने लगे प्रयासpic.twitter.com/w6nRDSZMC3
— Gagandeep Singh (@GagandeepNews)September 18, 2023

“ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಶೀಘ್ರವೇ ಪೊಲೀಸರು ಆರೋಪಿಗಳನ್ನು ಗುರುತಿಸಿ ಬಂಧಿಸಲಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), ಮತ್ತು 34 (ಸಾಮಾನ್ಯ ಉದ್ದೇಶಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಡಿಸಿಪಿ ಹೇಳಿದ್ದಾರೆ,(ಏಜೆನ್ಸೀಸ್).
ರಿ-ರಿಲೀಸ್​ಗೆ ಸಜ್ಜಾಯ್ತು ಕಮಲ್​ ಹಾಸನ್​ ನಟನೆಯ ಸೂಪರ್​ ಹಿಟ್​ ಸಿನಿಮಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + one =
Remember me
