ಉದಯಪುರ:ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಕನ್ಹಯ್ಯಲಾಲ್​ ಹತ್ಯೆ ಖಂಡಿಸಿ ಗುರುವಾರ ಬೃಹತ್​ ಪ್ರತಿಭಟನೆ ನಡೆಸಲಾಯಿತು. ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಲಾಗಿದ್ದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ಟೈಲರ್​ ಕನ್ಹಯ್ಯಲಾಲ್​ ಹತ್ಯೆಯಾದ ಸ್ಥಳದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ಈ ವೇಳೆ ಕಲ್ಲು ತೂರಾಟ ನಡೆದಿದೆ. ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದರು. ಈ ವೇಳೆ ಭಯೋತ್ಪಾದಕರ ಜತೆ ಸಂಪರ್ಕ ಹೊಂದಿರುವ ಹತ್ಯೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಭೀಕರ ಹತ್ಯೆ ನಡೆದ ಸ್ಥಳದಿಂದಲೇ ಪ್ರತಿಭಟನಾಕಾರರು ಮೆರವಣಿಗೆ ಪ್ರಾರಂಭಿಸಿದ್ದು, ಈ ವೇಳೆ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರಿಂದ ಕಲ್ಲು ತೂರಾಟ ಕೂಡ ನಡೆದಿದೆ.
ಶಾಂತಿಯುತ ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ನೀಡಿದ್ದು, ಹೆಚ್ಚು ಜನರು ಸೇರಿಸುವುದರಿಂದ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಯಂತ್ರಿಸಬೇಕಾಯಿತು, ಸದ್ಯಕ್ಕೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ ಹತ್ಯೆಯಾದ ಕನ್ಹಯ್ಯ ಲಾಲ್​ ಕುಟುಂಬಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸೂಚಿಸಿದ್ದಾರೆ.(ಏಜೆನ್ಸೀಸ್​)
ರಾಷ್ಟ್ರ ರಾಜಧಾನಿಯಲ್ಲಿ ತಂಪೆರೆದ ವರುಣ: ದೆಹಲಿಯ ಹಲವೆಡೆ ಭಾರೀ ಮಳೆ, ವಿಮಾನ ಸಂಚಾರ ವಿಳಂಬ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + three =
Remember me
