ಚೆನ್ನೈ:ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಇನ್ನೊಮ್ಮೆ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅವರು ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿ ಆಗುವಂತಾಗಿದೆ.
ಸನಾತನ ಧರ್ಮ ಡೆಂಘಿ-ಮಲೇರಿಯಾ ಇದ್ದ ಹಾಗೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಉದಯನಿಧಿ, ಆ ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದರು. ಸನಾತನ ಧರ್ಮದ ಕುರಿತು ಉದಯನಿಧಿ ಹೀಗೆ ಅವಹೇಳನಕಾರಿಯಾಗಿ ಮಾತನಾಡಿದ್ದರ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಉದಯನಿಧಿಯ ಅವಹೇಳನಕಾರಿ ಹೇಳಿಕೆಯನ್ನು ಅನೇಕ ನಾಯಕರು ಖಂಡಿಸಿದ್ದರು. ಮಾತ್ರವಲ್ಲ ಹಿಂದೂಪರ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿದ್ದವು. ಅದಾಗ್ಯೂ ಉದಯನಿಧಿ ಇನ್ನೊಮ್ಮೆ ಸನಾತನ ಧರ್ಮದ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆಗೊಳಿಸಿದರೆ ಅಸ್ಪ್ರಶ್ಯತೆ ತೊಲಗುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡುವಾಗ ಉದಯನಿಧಿ ಈ ರೀತಿ ಹೇಳಿದ್ದಾರೆ. –ಏಜೆನ್ಸೀಸ್
ಮೀನು ಮಾರ್ಕೆಟ್​ನಲ್ಲಿ ಮಾತೃವಾತ್ಸಲ್ಯ ಅನಾವರಣ; ವಿದೇಶದಿಂದ ಮಗ ಮುಖಮುಚ್ಚಿಕೊಂಡು ಬಂದರೂ ಗುರುತು ಹಿಡಿದ ಅಮ್ಮ!

ಅಭಿನವ ಹಾಲಶ್ರೀ ನೀಡಿದ್ದ ಲಕ್ಷಾಂತರ ರೂಪಾಯಿ ವಾಪಸ್ ಮಠಕ್ಕೆ ತಲುಪಿದ್ದು ಹೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 3 =
Remember me
