ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರು 2020ರ ಮಾರ್ಚ್​ 7ರಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ಶಿವಸೇನೆ ಮುಖಂಡ ಸಂಜಯ್​ ರಾವತ್​ ಇಂದು ತಿಳಿಸಿದ್ದಾರೆ.
ಸಂಜಯ್​ ರಾವತ್​ ಅವರು ಟ್ವೀಟ್​ ಮೂಲಕ ಈ ವಿಚಾರ ತಿಳಿಸಿದ್ದಾರೆ. ಮಹಾರಾಷ್ಟ್ರ ವಿಕಾಸ ಅಘಾಡಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಮಾರ್ಚ್​ಗೆ 100 ದಿನಗಳು ಪೂರ್ಣವಾಗುತ್ತವೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
2019ರ ನವೆಂಬರ್​ 28ರಂದು ಉದ್ಧವ್​ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಅವರು ಮಾರ್ಚದಲ್ಲೇ ಮೊದಲಬಾರಿಗೆ ಅಯೋಧ್ಯಾಕ್ಕೆ ಭೇಟಿ ನೀಡಿದಂತಾಗುತ್ತದೆ. ಅಯೋಧ್ಯೆಯಲ್ಲಿ ಸದ್ಯ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + five =
Remember me
