ಲಂಡನ್:ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿಗೆ ಇನ್ನೊಂದು ತಿಂಗಳು ಜೈಲೇ ಗತಿ. ಏಕೆಂದರೆ ಇವರ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್‌ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಆಗಸ್ಟ್ 6ರ ವರೆಗೆ ವಿಸ್ತರಿಸಿದೆ.
ಸದ್ಯ ಜೈಲಿನಲ್ಲಿರುವ ನೀರವ್ ಮೋದಿಯ (48) ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್‌ ಬಂಧನದ ಅವಧಿಯನ್ನು ವಿಸ್ತರಿಸಿದೆ. ಈ ಕುರಿತು ನ್ಯಾಯಾಧೀಶ ಎಮ್ಮಾ ಅರ್ಬುತ್‌ನೋಟ್ ಆದೇಶ ಹೊರಡಿಸಿದರು.
ಇದನ್ನೂ ಓದಿ:ಅಗೆದಷ್ಟೂ, ಬಗೆದಷ್ಟೂ ಚಿನ್ನ, ವಜ್ರ,ಠೇವಣಿ- ನೀರವ್‌ ಮೋದಿಯ ಮತ್ತಷ್ಟು ಆಸ್ತಿ ಜಪ್ತಿ
ಅದೇ ಇನ್ನೊಂದೆಡೆ, ಇವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಸೆಪ್ಟೆಂಬರ್ ನಲ್ಲಿ ಎರಡನೇ ಹಂತದ ವಿಚಾರಣೆ ನಡೆಯಲಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ. ಇದಾಗಲೇ ಇವರ ಅನೇಕ ಆಸ್ತಿಪಾಸ್ತಿಗಳನ್ನು, ಬ್ಯಾಂಕ್‌ ಠೇವಣಿಗಳನ್ನು, ಆಭರಣಗಳನ್ನು ಕೋರ್ಟ್‌ ಆದೇಶದ ಮೇರೆಗೆ ವಶಪಡಿಸಿಕೊಳ್ಳಲಾಗಿದೆ.
ಒಬ್ಬನೇ ವರ, ಇಬ್ಬರು ವಧು: ಈ ಮದುವೆಯ ಕಾರಣ ಬಲು ಇಂಟರೆಸ್ಟಿಂಗ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + 12 =
Remember me
