ನವದೆಹಲಿ:ತಮಿಳುನಾಡು ಸಿಎಂ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್​ ಸನಾತನ ಧರ್ಮದ ಕುರಿತು ನೀಡಿದ್ದ ಅವಹೇಳನಕಾರಿ ಹೇಳಿಕೆ ದೇಶಾದ್ಯಂತ ವಿವಾದ ಸೃಷ್ಟಿಸಿದೆ. ಉದಯನಿಧಿ ಹೇಳಿಕೆಯನ್ನು ಆಕ್ಷೇಪಿಸಿ ಹಿಂದೂಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೂಡ ಪರೋಕ್ಷವಾಗಿ ಇದರ ಕುರಿತು ದನಿಗೂಡಿಸಿದ್ದಾರೆ.
ಜಿ-20 ಶೃಂಗಸಭೆ ಸಲುವಾಗಿ ಭಾರತಕ್ಕೆ ಆಗಮಿಸಿರುವ ಬ್ರಿಟನ್ ಪ್ರಧಾನಿ, ಇನ್​ಫೊಸಿಸ್​ನ ಸುಧಾಮೂರ್ತಿ- ನಾರಾಯಣಮೂರ್ತಿ ದಂಪತಿಯ ಅಳಿಯ ರಿಷಿ ಸುನಕ್​, ನಾನೊಬ್ಬ ಹೆಮ್ಮೆಯ ಹಿಂದೂ ಎಂದು ಹೇಳಿಕೊಂಡಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ನಾನು ಹಿಂದೂವಾಗಿಯೇ ಬೆಳೆದಿದ್ದೇನೆ, ಅದಕ್ಕೇ ಹೀಗಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಇತ್ತೀಚೆಗೆ ರಕ್ಷಾ ಬಂಧನವನ್ನೂ ಆಚರಿಸಿದ್ದೇನೆ. ಸಹೋದರಿಯರು ರಾಖಿ ಕಟ್ಟಿದ್ದಾರೆ. ಕಾರಣಾಂತರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲು ಆಗಿರಲಿಲ್ಲ. ಆದರೆ ಭಾರತದಲ್ಲಿ ಇರುವ ಈ ಸಮಯದಲ್ಲಿ ದೇವಸ್ಥಾನಕ್ಕೂ ಭೇಟಿ ನೀಡಲಿದ್ದೇನೆ, ಇದು ನನಗೆ ಮುಖ್ಯ ಸಂಗತಿ ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ:ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು: ಆರ್​ಎಸ್ಎಸ್​ ಮುಖ್ಯಸ್ಥ ಮೋಹನ್ ಭಾಗವತ್​
ದೇಶಕ್ಕೆ ಭಾರತ ಎಂದು ಹೆಸರಿಡುವ ಕುರಿತು, ವಸುಧೈವ ಕುಟುಂಬಕಂ ಧ್ಯೇಯದೊಂದಿಗೆ ನಡೆಯಲಿರುವ ಜಿ-20 ಶೃಂಗಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇದೊಂದು ಒಳ್ಳೆಯ ಯೋಚನೆ ಎಂದಿದ್ದಾರೆ. ಒಂದು ಕುಟುಂಬ ಎಂದು ಹೇಳಿದಾಗ ಪ್ರಧಾನಿ ಮೋದಿ ಅವರು ವಿವರಿಸಿದಂತೆ ಯುಕೆ ಮತ್ತು ಭಾರತ ಮಧ್ಯೆ ನಾನು ಒಂದು ಜೀವಂತ ಸೇತು. ಭಾರತ ಮೂಲದ ನನ್ನಂಥ 20 ಲಕ್ಷ ಮಂದಿ ಯುಕೆನಲ್ಲಿದ್ದಾರೆ, ನನ್ನ ಪೂರ್ವಜರಿರುವ ಭಾರತಕ್ಕೆ ನಾನು ಈಗ ಬ್ರಿಟನ್ ಪ್ರಧಾನಿಯಾಗಿ ಆಗಮಿಸಿ ಭಾಗಿ ಆಗುತ್ತಿರುವುದು ನನಗೆ ವಿಶೇಷ ಅನಿಸುತ್ತಿದೆ ಎಂದಿದ್ದಾರೆ.
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!

ಮಾಂಗಲ್ಯ ಕಟ್ಟಿಸಿಕೊಂಡಿದ್ದ ಕೊರಳಿಗೇ ಬಿತ್ತು ಉರುಳು; ಮದುವೆಯಾದ ಮೂರೇ ತಿಂಗಳಲ್ಲಿ ಬದುಕೇ ಮುಕ್ತಾಯ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:3 × two =
Remember me
