ನವದೆಹಲಿ :ಭಾರತದಲ್ಲಿ ಕರೊನಾ ಪ್ರಕರಣಗಳು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಬ್ರಿಟೀಷ್​ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ರದ್ದಾಗಿದೆ. ಜಾನ್ಸನ್​ ಅವರು ಏಪ್ರಿಲ್​ 25 ಮತ್ತು 26 ರಂದು ಭಾರತ ಪ್ರವಾಸ ಕೈಗೊಳ್ಳುವುದು ಈ ಮುನ್ನ ನಿಗದಿಯಾಗಿತ್ತು.
“ಹಾಲಿ ಕರೊನಾ ಸನ್ನಿವೇಶದ ದೃಷ್ಟಿಯಿಂದ ಪರಸ್ಪರ ಸಮ್ಮತಿಯೊಂದಿಗೆ ಇಂಗ್ಲೆಂಡ್ ಪ್ರಧಾನಿ ಜಾನ್ಸನ್ ಅವರು ಮುಂದಿನ ವಾರ ಭಾರತದಕ್ಕೆ ಆಗಮಿಸುವುದಿಲ್ಲ ಎಂದು ನಿರ್ಧಾರವಾಗಿದೆ” ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಂ ಬಾಗ್ಚಿ ಹೇಳಿದ್ದಾರೆ.
ಇದನ್ನೂ ಓದಿ:ರಾಜಧಾನಿಯಲ್ಲಿ ಒಂದು ವಾರ ಲಾಕ್​ಡೌನ್ ; ‘ಇಷ್ಟು ಕೇಸ್ ಬಂದರೆ ಆರೋಗ್ಯ ವ್ಯವಸ್ಥೆ ಕುಸಿದೀತು’ ಎಂದ ಸಿಎಂ
“ಪರಿವರ್ತಿತ ಭಾರತ-ಯು.ಕೆ. ಸಂಬಂಧದ ಬಗೆಗಿನ ಯೋಜನೆಗಳನ್ನು” ಪ್ರಾರಂಭಿಸಲು ಮುಂದಿನ ದಿನಗಳಲ್ಲಿ ಉಭಯ ಸರ್ಕಾರಗಳು ವರ್ಚುವಲ್ ಸಭೆಗಳನ್ನು ನಡೆಸಲಿವೆ. “ಭಾರತ-ಇಂಗ್ಲೆಂಡ್ ಪಾಲುದಾರಿಕೆಯನ್ನು ತನ್ನ ಪೂರ್ಣ ಸಾಮರ್ಥ್ಯಕ್ಕೆ ಕೊಂಡೊಯ್ಯುವುದಕ್ಕೆ ಉಭಯ ನಾಯಕರೂ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಈ ನಿಟ್ಟಿನಲ್ಲಿ ನಿಕಟ ಸಂಪರ್ಕದಲ್ಲಿರಲು ಇಚ್ಛಿಸುತ್ತಾರೆ. ಮತ್ತು ಇದೇ ವರ್ಷ ನಂತರದಲ್ಲಿ ವೈಯಕ್ತಿಕ ಸಭೆ ನಡೆಸಲು ಎದುರು ನೋಡುತ್ತಾರೆ” ಎಂದು ಬಾಗ್ಚಿ ಹೇಳಿದ್ದಾರೆ.
ಈ ವರ್ಷ ಜಾನ್ಸನ್ ತಮ್ಮ ಭಾರತ ಪ್ರವಾಸವನ್ನು ರದ್ದುಗೊಳಿಸುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಇಂಗ್ಲೆಂಡಿನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 26 ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಜಾನ್ಸನ್, ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದರು. ಜೂನ್​ನಲ್ಲಿ ಇಂಗ್ಲೆಂಡಿನಲ್ಲಿ ನಡೆಯಲಿರುವ ಜಿ -7 ರಾಷ್ಟ್ರಗಳ ಶೃಂಗಸಭೆಗಿಂತ ಮೊದಲು ಭಾರತಕ್ಕೆ ಭೇಟಿ ನೀಡುವ ಭರವಸೆ ನೀಡಿದ್ದರು.(ಏಜೆನ್ಸೀಸ್)
ಕರೊನಾ ಎಮರ್ಜೆನ್ಸಿ : ದೇಶದ ವೈದ್ಯರು, ಔಷಧಿ ಕಂಪೆನಿಗಳೊಂದಿಗೆ ಮೋದಿ ಸಭೆ

‘ದೆಹಲಿ ಪೊಲೀಸರು ಚಕ್ರವರ್ತಿಗಳಂತೆ ವರ್ತಿಸುತ್ತಿದ್ದಾರೆ’ ಎಂದ ದೀಪ್ ಸಿಧು ವಕೀಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + six =
Remember me
