ಪಟ್ನಾ:ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಬ್ರಿಡ್ಜ್ ಕುಸಿದು ಬಿದ್ದು ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆಯೊಂದು ಕಿಶನ್​ಗಂಜ್​ ಪ್ರದೇಶದಲ್ಲಿ ನಡೆದಿದೆ.
ಮೆಚ್ಚಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಪಿಲ್ಲರ್​ ಒಂದು ಕುಸಿದು ಬಿದ್ದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
#WATCH| Pillar of an under-construction bridge on Mechi River which connects Katihar and Kishanganj districts in Bihar, caves in near Gori village on NH-327E.pic.twitter.com/VsYAP9xnl7
ಇದನ್ನೂ ಓದಿ:ನಳಿನ್​ ಕುಮಾರ್​ ಕಟೀಲ್​ರನ್ನು ಕಾಮಿಡಿ ಕಿಲಾಡಿ ಎನ್ನುವುದು ಇದೇ ಕಾರಣಕ್ಕೆ: ಕಾಂಗ್ರೆಸ್​ ಟಾಂಗ್​
ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದ ಅಧಿಕಾರಿ ಅರವಿಂದ್​ ಕುಮಾರ್​ ಕಿಶನ್​ಗಂಜ್​ ಹಾಗೂ ಕತಿಹಾರ್​ ಜಿಲ್ಲೆಗಳನ್ನು ಸಂಪರ್ಕಿಸುವ NH-327Eಯ ನಿರ್ಮಾಣ ಹಂತದ ಸೇತುವೆಯೊಂದು ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸೇತುವೆ ನಿರ್ಮಾಣದ ವೇಳೆ ಆಗಿರುವ ಲೋಪದೋಷದಿಂದಾಗಿ ಪಿಲ್ಲರ್​ ಕುಸಿದಿದೆ. ಪ್ರಕರಣ ಸಂಬಂಧ ಸಮಿತಿ ಒಂದನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಅವಘಡಕ್ಕೆ ಕಾರಣವನ್ನು ಪತ್ತೆ ಹಚ್ಚಲಿದ್ಧಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದ ಅಧಿಕಾರಿ ಅರವಿಂದ್​ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 4 =
Remember me
