ನವದೆಹಲಿ:ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಸಿಲುಕಿಕೊಂಡಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ದೆಹಲಿಯ ಸತ್ಯನಿಕೇತನ ಏರಿಯಾದಲ್ಲಿ ಸೋಮವಾರ ಏಕಾಏಕಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಸುದ್ದಿ ತಿಳಿದ ಕೂಡಲೇ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದೊಳಗೆ ಸಿಲುಕಿರುವವರ ರಕ್ಷಣೆಯಲ್ಲಿ ತೊಡಗಿದೆ.
ಸೋಮವಾರ ಮಧ್ಯಾಹ್ನ 1.24ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಸದ್ಯಕ್ಕೆ ಐವರು ಕಾರ್ಮಿಕರು ಕಟ್ಟಡದೊಳಗೆ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಎಷ್ಟು ಕಾರ್ಮಿಕರು ಸಿಲುಕಿದ್ದಾರೆ ಎಂಬ ಖಚಿತ ಮಾಹಿತಿ ಇನ್ನು ಪಡೆಯಬೇಕಿದೆ.
ಪೊಲೀಸರು ಕೂಡಾ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅಗ್ನಿಶಾಮಕ ಸಿಬ್ಬಂದಿ ನಿರ್ದೇಶಕ ಅತುಲ್​ ಗಾರ್ಗ್ ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣದ ಕಾಮಗಾರಿ ಸರಿಯಿಲ್ಲ ಈ ಬಗ್ಗೆ ಮಾರ್ಚ್​ ತಿಂಗಳಲ್ಲೇ ನೊಟೀಸ್​ ನೀಡಲಾಗಿತ್ತು. ಆದರೂ ಕಾಮಗಾರಿ ಮುಂದುವರಿಸಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಅವರು ತಿಳಿಸಿದರು.
ಮಾಸ್ಕ್ ಕಡ್ಡಾಯ, ಸಿಎಂ ಸಭೆಯಲ್ಲಿ ತೀರ್ಮಾನ: ಸಚಿವ ಡಾ.ಕೆ.ಸುಧಾಕರ್

ಸಾಕು ನಾಯಿಗೆ ಅದ್ಧೂರಿ ಸೀಮಂತ ಕಾರ್ಯ ಮಾಡಿದ ಮಾಲೀಕ! ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − six =
Remember me
